About the Author

ಲೇಖಕ ರವಿ.ಬ.ಹಾದಿಮನಿ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಳಮಳ್ಳಿ ಗ್ರಾಮದವರು. ತಂದೆ ಬಸವಂತರಾಯ. ತಾಯಿ ಧನಪೂರ್ಣ. ಇವರು ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲಿ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಶಿಕ್ಷಣವನ್ನು ತಶಾವರಗೇರಾದ  ಶಶಿಧರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ, ಬಾಗಲಕೋಟೆ ಜಿಲ್ಲೆಯ ಹುನಗುಂದದ ವ್ಹಿ.ಎಂ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವ್ಹಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ. ಪದವಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣದ ಮೂಲಕ ಕನ್ನಡದಲ್ಲಿ ಎಂ.ಎ ಪದವಿ ಪಡೆದರು. ಪ್ರಸ್ತುತ ಕುಷ್ಟಗಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. 

ರವಿ.ಬ. ಹಾದಿಮನಿ