About the Author

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು.

ಶಿವರಾಮ ಕಾರಂತ ಪ್ರಶಸ್ತಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳು ಸಂದಿವೆ. ರಾಜ್ಯ ಸರ್ಕಾರದ ‌ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಬೆಳಗೆರೆ ಅವರಿಗೆ ಓದು, ತಿರುಗಾಟ ಇಷ್ಟವಾದ ಹವ್ಯಾಸ. ಇವರ ಕೆಲವು ಕೃತಿಗಳು ದಾರಿ, ಅಗ್ನಿ ಕಾವ್ಯ, ಅರ್ತಿ, ನೀ ಹಿಂಗ ನೋಡಬ್ಯಾಡ ನನ್ನ, ಗಾಂಧೀ ಹತ್ಯೆ ಮತ್ತು ಗೋಡ್ಸೆ, ರಾಜೀವ್ ಹತ್ಯೆ ಏಕಾಯಿತು? ಹೇಗಾಯಿತು?, ಗೋಲಿಬಾರ್, ಪಾಪಿಗಳ ಲೋಕದಲ್ಲಿ, ಲವಲವಿಕೆ ಮುಂತಾದವು. ಇವರು 2020 ನವೆಂಬರ್‌ 13ರಂದು ನಿಧನ ಹೊಂದಿದರು. 

ರವಿ ಬೆಳಗೆರೆ

(15 Mar 1958-13 Nov 2020)

Books by Author

ABOUT THE AUTHOR