ಸಂಜಯ್ ಚಿತ್ರದುರ್ಗ ಮೂಲತಃ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೊಬನಹಳ್ಳಿಯವರು. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಶಿಕ್ಷಣ. ಮುಖ್ಯವಾಗಿ ಸಮಕಾಲೀನ ಕನ್ನಡ ಸಾಹಿತ್ಯದ ಓದು ಹಾಗೂ ಹೊಸ ಕಾಲದ ಸಿನಿಮಾ ವೀಕ್ಷಣೆ ಅವರ ಹವ್ಯಾಸ. ಬರವಣಿಗೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ಅವರ ಬರಹಗಳು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಅಲೆಮಾರಿ ಸಂತ’ ಬ್ಲಾಗ್ ನಲ್ಲಿ ತಮ್ಮ ಬರಹಗಳನ್ನು ಪ್ರಕಟಿಸುತ್ತಾರೆ.