About the Author

ಕವಿ ಡಾ. ಶಿವಾನಂದ ಎಸ್. ಬಿಳವಾರ ಅವರು ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದವರು. ಸ್ವಗ್ರಾಮದಲ್ಲಿ ಪ್ರೌಢ ಶಿಕ್ಷಣ, ಗುಲಬರ್ಗಾದಲ್ಲಿ ಬಿ. ಎ,  ಪದವಿ, ಗುಲಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎಂ. ಎ ಪದವಿ ನಂತರ ಇದೇ ವಿಶ್ವವಿದ್ಯಾಲಯದಿಂದ "ಗುಲಬರ್ಗಾ ಜಿಲ್ಲೆಯ ದಲಿತ-ಬಂಡಾಯ ಸಾಹಿತ್ಯ: ಒಂದು ಅಧ್ಯಯನ’, ವಿಷಯದಲ್ಲಿ ಪಿಎಚ್. ಡಿ ಪದವೀಧರರು. ಗುಲಬರ್ಗಾ ವಿಶ್ವವಿದ್ಯಾಲಯದ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಒಂದು ವರ್ಷದ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ವೀರಣ್ಣ ದಂಡೆಯವರ ಮಾರ್ಗದರ್ಶನದಲ್ಲಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ, "ಕರ್ನಾಟಕ ಗ್ರಾಮ ಚರಿತ್ರೆ ಕೋಶ" ಯೋಜನೆಯಡಿ, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಳ್ಳಿಗಳ ಐತಿಹಾಸಿಕ, ಸಾಮಾಜಿಕ, ಸಾಂಸ್ಕೃತಿಕ ಪರಂಪರೆಗಳನ್ನು ಅಧ್ಯಯನ ಮಾಡಿ ಜಾನಪದ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದಾರೆ. ಹಲವಾರು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ.

ಕೃತಿಗಳು: ಅರಿಮನವೆ (ಕವನ ಸಂಕಲನ)

ಶಿವಾನಂದ ಎಸ್. ಬಿಳವಾರ

Books by Author