About the Author

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ಹೆಗ್ಗಳಿಕೆ ಅವರದ್ದು. ಮಂಗಳೂರು ಮತ್ತು ಮುಂಬಯಿ ವಿ.ವಿ.ಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಮರಾಠಿ ಕನ್ನಡ ಸ್ನೇಹ ಸಂವರ್ಧನೆಯಲ್ಲಿ ಪಾತ್ರವಹಿಸಿದವರು. ಬಾಸೆಲ್‌ ಮಿಷನ್‌ಸಂಸ್ಥೆಯ ಮತ್ತು ಕರಾವಳಿಯ ಜನರ ಸಂಪರ್ಕ ಸಂಬಂಧ, ಇರಿಸಿಕೊಂಡಿದ್ದರು.

ಶ್ರೀನಿವಾಸ ಹಾವನೂರ

Books by Author