About the Author

ಕವಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕರಾಗಿರುವ ಡಾ. ಶ್ಯಾಮಸುಂದರ ಬಿದರಕುಂದಿ ಅವರು ಸದ್ಯ ಹುಬ್ಬಳ್ಳಿ  ನಿವಾಸಿಯಾಗಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ., ಪಿಎಚ್‌.ಡಿ. ಪಡೆದಿರುವ ಅವರು ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. 

ಕೃತಿಗಳು: ಅಜ್ಜಗಾವಲು, ಅಲ್ಲಮ ಪ್ರಭುವಾದ, ಬರುವುದೇನುಂಟೊಮ್ಮೆ, ತಲೆ ಎತ್ತಿ ಶರಣು (ಕವನ ಸಂಕಲನ), ಕೃತಿ ನೋಟ, ಅಚ್ಚು ಕಟ್ಟು, ನೆಲೆಗಟ್ಟು, ಪ್ರಸಂಗೋಚಿತ (ವಿಮರ್ಶೆ), ನವ್ಯಮಾರ್ಗದ ಕಾದಂಬರಿಗಳು (ಪಿಎಚ್.ಡಿ. ಮಹಾಪ್ರಬಂಧ), ಗಂಧಕೊರಡು, ಪ್ರಬಂಧಪ್ರಪಂಚ, ಸ್ವಾತಂತ್ರ್ಯದ ಸವಿನೀರು, ಕರ್ಕಿಯವರ ಸಮಗ್ರ ಸಾಹಿತ್ಯ ( ಸಂಪಾದಿತ), ಗರೂಡ ಶ್ರೀಪಾದರಾವ; ಶಂಕರ ಮೊಕಾಶಿ ಪುಣೇಕರ; ಫ.ಶಿ. ಭಾಂಡಗೆ (ಇತರೆ)

ಶ್ಯಾಮಸುಂದರ ಬಿದರಕುಂದಿ

(18 May 1947)

BY THE AUTHOR