About the Author

ಪ್ರೊ. ಶಿವರಾಮಯ್ಯ ನವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕ್ ಅವಿನಮಡು ಗ್ರಾಮದಲ್ಲಿ 1940 ರ ಆಗಸ್ಟ್‌ 10ರಂದು ಜನಿಸಿದರು. ತಂದೆ ಕಂಪಲಪ್ಪ, ತಾಯಿ ಬೋರಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದ ಅವರು ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.

ಅಧ್ಯಾಪನ ಹಾಗೂ ಸಂಶೋಧನ ವೃತ್ತಿಯ ಜೊತೆಯಲ್ಲಿಯೇ ಜನಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡರು. ಸಕ್ರಿಯ ಹೋರಾಟಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ.

 ಸ್ವಪ್ನ ಸಂಚಯ (ಕವನ ಸಂಕಲನ), ಬೌದ್ಧ ಭಿಕ್ಷಣಿ (ಮಕ್ಕಳ ಪುಸ್ತಕ ), ಸಾಹಿತ್ಯ ಪರಿಸರ, ಉರಿಯ ಉಯಾಲೆ (ವಿಮರ್ಶೆ), ಹರಿಹರ-ರಾಘವಾಂಕ (ಜಾನಪದ ಅಧ್ಯಯನ), ದನಿ ಇಲ್ಲದವರ ದನಿ, ಕುದುರೆಮುಖ (ವೈಚಾರಿಕ), ಇವರ ಕೆಲವು ಪ್ರಕಟಿತ ಕೃತಿಗಳು. ''ನಾಡೋಜ ಪಂಪ'' ಎಂಬ ನಾಟಕ ಬರೆದಿರುವ ಅವರು ಲಂಕೇಶ್, ಹೊಸತು, ಅಗ್ನಿ, ಮುಂತಾದ ಪತ್ರಿಕೆಗಳಿಗೆ ಹಲವಾರು ಲೇಖನಗಳನ್ನು ಬರೆದಿದ್ದಾರೆ.

ಶಿವರಾಮಯ್ಯ

(10 Aug 1940)

Books by Author