About the Author

ಯಲಹಂಕ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಆಗಿರುವ ಸುಭಾಷ ರಾಜಮಾನೆ ಅವರು ಮೂಲತಃ ಬೆಳಗಾವಿಯವರು. ಧಾರವಾಡದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಯಾಗಿ ಪದವಿ ಪಡೆದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ರಹಮತ್ ತರೀಕೆರೆ ಅವರ ಮಾರ್ಗದರ್ಶನದ ಕನ್ನಡ ವಿಮರ್ಶೆ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ.ಪದವಿ ಗಳಿಸಿದರು. ಕನ್ನಡ ಇಂಗ್ಲಿಷ್‌, ಮರಾಠಿ, ಹಿಂದಿ ಭಾಷೆಗಳಲ್ಲಿ ಉತ್ತಮ ಗತಿ ಇರುವ ಸುಭಾಷ ಅವರಿಗೆ ಸಿನಿಮಾ-ಸಾಹಿತ್ಯ ಅಚ್ಚುಮೆಚ್ಚು. ಸಿನಿಮಾ ಬಗ್ಗೆ ಗಂಭೀರ ಅಧ್ಯಯನ ನಡೆಸುತ್ತಿರುವ ಅವರು ದಿ ಆರ್ಟಿಸ್ಟ್‌ ಸಿನಿಮಾದ ಚಿತ್ರಕತೆಯನ್ನು ಕನ್ನಡೀಕರಿಸಿ ಪ್ರಕಟಿಸಿದ್ದಾರೆ.  ವಿಕ್ಟರ್‌ ಫ್ರಾಂಕ್‌ನ ಕೃತಿಯನ್ನು ’ಬದುಕಿನ ಅರ್ಥವನು ಹುಡುಕುತ್ತ..’ಶೀರ್ಷಿಕೆಯ ಅಡಿಯಲ್ಲಿ ಪ್ರಕಟಿಸಿದ್ದಾರೆ.

ಸುಭಾಷ್ ರಾಜಮಾನೆ

(01 Jun 1980)