About the Author

ಪ್ರಬಂಧಗಾರ್ತಿ ಸುಮಾ ವೀಣಾ ಅವರು ಉಪನ್ಯಾಸಕಿ. ತಂದೆ ಪುಟ್ಟರಾಜು, ತಾಯಿ ಲಲಿತಾ. ಹಾಸನದ ಹೇಮಗಂಗೋತ್ರಿಯಲ್ಲಿ ಕನ್ನಡ ಎಂ. ಎ ಅಧ್ಯಯನ. ವಿದ್ಯಾರ್ಥಿ ದಿಸೆಯಿಂದಲೇ ರಾಜ್ಯ ಮತ್ತು ರಾಷ್ಟ್ರಿಯ ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಅವರ ಬರೆಹಗಳು ವಿಜಯವಾಣಿ, ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ವಚನ ಸಾಹಿತ್ಯ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ.

ಕೃತಿಗಳು: ನಲಿವಿನ ನಾಲಗೆ (ಪ್ರಬಂಧಗಳ ಸಂಕಲನ), ಶೂರ್ಪನಖಿ ಅಲ್ಲ ಚಂದ್ರ ನಖಿ (ಕವನ ಸಂಕಲನ), ಮನಸ್ಸು ಕನ್ನಡಿ (ಪ್ರಬಂಧಗಳ ಸಂಕಲನ).

ಸುಮಾ ವೀಣಾ

(04 Jul 1977)