About the Author

ಟಿ.ಎಂ. ಶಿವಶಂಕರ್ ಅವರು ಬಿ.ಎಸ್ಸಿ. ಪದವೀಧರರಾಗಿದ್ದು, ಮಾನಸಗಂಗೋತ್ರಿಯಲ್ಲಿಭೂವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಸಹಾಯಕ ವಿಜ್ಞಾನಿಯಾಗಿ ತಮ್ಮ ವೃತ್ತಿ ಬದುಕನ್ನು ಆರಂಭಿಸಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಿರಿಯ ಭೂವಿಜ್ಞಾನಿಯಾಗಿ ನಿವೃತ್ತರಾಗಿದ್ದಾರೆ. ತಮ್ಮ ಇಡೀ ಸೇವಾವಧಿಯನ್ನು ಅಂತರ್ಜಲ ಶೋಧನಾ ವಿಭಾಗದಲ್ಲಿಯೇ ಕಳೆದು, ಅಂತರ್ಜಲದ ಬಗ್ಗೆ ವಿಶೇಷ ಜ್ಞಾನ ಪಡೆದಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ  ಸ್ನಾತಕೋತ್ತರ ಪದವಿ ಪಡೆದು ಹವ್ಯಾಸಿ ಬರಹಗಾರರಾಗಿದ್ದಾರೆ. ಇವರ ಬಹಳಷ್ಟು ಲೇಖನಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಟಿ.ಎಂ. ಶಿವಶಂಕರ್‌