About the Author

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ಪಡೆದಿರುವ ಇವರು ಓಶೋನ ಹಲವು ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ. ಇವರ ಕೃತಿಗಳು- ಬುದ್ಧ ಮತ್ತು ಪರಂಪರೆ, ಹುಚ್ಚುತನವೇ ಅನುಗ್ರಹ ನೀಷೆ, ಓಶೋ ಕಾವ್ಯಧರ್ಮ ಮತ್ತು ಧರ್ಮ, ಜ್ಹೆನ್ ಹಾಯ್ಕುಗಳು, ಮಹಾತ್ಮ, ರಮಣ ಹೃದಯ, ದೇವರು, ಇದನ್ನು ಬಯಸಿರಲಿಲ್ಲ ಇತ್ಯಾದಿ.  

ಟಿ.ಎನ್. ವಾಸುದೇವ ಮೂರ್ತಿ

(30 Dec 1974)

Comments