About the Author

ಕನ್ನಡ ನಾಟಕರಂಗದಲ್ಲಿ ಹೊಸಶಕೆಯನ್ನು ಆರಂಭಿಸಿದ ಟಿ ಪಿ. ಕೈಲಾಸಂ ಅವರು ಬೆಂಗಳೂರಿನಲ್ಲಿ 26-07-1885ರಲ್ಲಿ ತ್ಯಾಗರಾಜ ಪರಮಶಿವ ಅಯ್ಯರ್ – ಕಲಮಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಬೆಂಗಳೂರು, ಹಾಸನ, ಮೈಸೂರುಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ 1908ರಲ್ಲಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿಗೆ ಸೇರಿ ಬಿ ಎ ಪದವಿಗಳಿಸಿದರು. ಪ್ರೌಢವ್ಯಾಸಂಗಕ್ಕೆ ಲಂಡನ್ನಿಗೆ ತೆರಳಿ 6 ವರ್ಷಗಳ ಕಾಲ ಭೂಗರ್ಭಶಾಸ್ತ್ರ ಅಭ್ಯಸಿಸಿ 1915ಕ್ಕೆ ಬೆಂಗಳೂರಿಗೆ ಹಿಂತಿರುಗಿದರು.

ಭೂಗರ್ಭಶಾಸ್ತ್ರ ಇಲಾಖೆಯಲ್ಲಿ ಭೂಶೋಧಕರಾಗಿ ಸೇರಿ 5 ವರ್ಷ ಉದ್ಯೋಗ ಮಾಡಿದರು. ಅನಂತರ ರಾಜೀನಾಮೆ ನೀಡಿ ರಂಗಭೂಮಿಯ ಚಟುವಟಿಕೆಗಳಲ್ಲಿ ನಿರತರಾದರು. ವ್ಯಾಯಾಮಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಕೈಲಾಸಂ ಕನ್ನಡ ನಾಟಕಕಾರರಾಗಿ ರಂಗ ನಾಟಕರಂಗಕ್ಕೆ ವಿಶೇಷ ಕೊಡುಗೆಗಳನ್ನಿತ್ತರು. ಅನೇಕರಿಗೆ ಹಾಸ್ಯ ಸಾಹಿತ್ಯ ನಾಟಕಗಳ ಮೂಲಕ ಜನಜಾಗೃತಿ ಮಾಡಿದರು.

1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಕೈಲಾಸಂ ಬರೆದುದಕ್ಕಿಂತ ಹೆಚ್ಚಾಗಿ ಹೇಳಿ ಬರೆಸಿದ ಇತರರು ಬರೆದುಕೊಂಡ ನಾಟಕಗಳೇ ಹೆಚ್ಚು. ಟೊಳ್ಳೂಗಟ್ಟಿ, ಬಹಿಷ್ಕಾರ, ಗಂಡಸ್ಕತ್ರಿ, ಪೋಲಿಕಿಟ್ಟಿ, ಸೂಳೆ, ನಂತರ ಕನ್ನಡ ಸಾಮಾಜಿಕ ನಾಟಕಗಳನ್ನೂ  ತಾವರೆಕೆರೆ (ಕಥಾಸಂಗ್ರಹ), ಕೋಳಿಕೇರಂಗ (ಹಾಡುಗಳು), ಕರ್ಣ, ಕೀಚಕ (ಇಂಗ್ಲಿಷ್ ನಾಟಕಗಳು).

ಕರ್ನಾಟಕ ಪ್ರಹಸನ ಪಿತಾಮಹ ಎನಿಸಿದ್ದ ಕೈಲಾಸಂ 23-11-1946 ರಲ್ಲಿ ನಿಧನರಾದರು. 

ಟಿ.ಪಿ. ಕೈಲಾಸಂ

(26 Jul 1885-23 Nov 1946)