About the Author

ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ಗ್ರಾಮದ ಟಿ.ಎಸ್. ಗೊರವರ, 1984 ಜೂನ್ 10 ರಂದು ಜನಿಸಿದರು.  ರಾಜೂರು, ಗಜೇಂದ್ರಗಡದಲ್ಲಿ ವಿದ್ಯಾಭ್ಯಾಸ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ಭ್ರಮೆ (2007) ಕಥಾ ಸಂಕಲನ, ಆಡು ಕಾಯೋ ಹುಡುಗನ ದಿನಚರಿ (2011) ಅನುಭವ ಕಥನ, ಕುದರಿ ಮಾಸ್ತರ (2012) ಕಥಾ ಸಂಕಲನ, ರೊಟ್ಟಿ ಮುಟಗಿ (2016) ಕಾದಂಬರಿ, ಮಲ್ಲಿಗೆ ಹೂವಿನ ಸಖ (2018) ಕಥಾ ಸಂಕಲನ ಪ್ರಕಟಿತ ಕೃತಿಗಳು.

ತನ್ನ ಎದೆಯ ಮೆದುವನ್ನೇ ನಾದಿ ನಾದಿ ಮಿದ್ದು ಒಂದು ಹದದಲ್ಲಿ ಕೆತ್ತಿದಂತಿರುವ ಇವರ ರಚನೆಗಳ ಚೆಲುವು-ಕಸುವು, ರೂಪಕ ಶಕ್ತಿಯನ್ನು ಪಡೆದ ಸಹಜ ವಿವರಗಳನ್ನು ಓದಿಯೇ ಆಸ್ವಾದಿ ಸಬೇಕು. ಇವರು ನುಡಿಸುವ ಭಾಷೆ ಭಾವಗೀತಾತ್ಮಕವಾಗಿದೆ. ತಮ್ಮ ಅಂತರ್ಮುಖ ಅನುಭವಗಳು ಹಾಗೂ ಸಂಯಮದ ಭಾಷೆಯಿಂದ ಓದುಗನನ್ನು ಒಳಗೆಳೆದುಕೊಳ್ಳುತ್ತಾರೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ, ದ.ರಾ.ಬೇಂದ್ರೆ ಗ್ರಂಥ ಬಹುಮಾನ, ಅರಳು ಪ್ರಶಸ್ತಿ, ಪ್ರಜಾವಾಣಿ, ಕನ್ನಡಪ್ರಭ ದೀಪಾವಳಿ ಕಥಾಸ್ಪರ್ಧೆ ಸೇರಿದಂತೆ ಹಲವು ಪುರಸ್ಕಾರಗಳು ಲಭಿಸಿವೆ. ವಿಜಯ ಕರ್ನಾಟಕದಲ್ಲಿ ಎಂಟು ವರ್ಷ ಉಪಸಂಪಾದಕನಾಗಿ ಕಾರ್ಯನಿರ್ವಹಣೆ, ಸದ್ಯ 'ಸಂಗಾತ' ತೈಮಾಸಿಕ ಸಾಹಿತ್ಯ ಪತ್ರಿಕೆ ಸಂಪಾದಕ.

ಟಿ.ಎಸ್‌. ಗೊರವರ

(10 Jun 1984)

BY THE AUTHOR