About the Author

ಕತೆಗಾರ ತಮ್ಮಣ್ಣ ಬೀಗಾರ  ಅವರು 1959 ನವೆಂಬರ 22 ರಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ ಗ್ರಾಮದಲ್ಲಿ ಜನಿಸಿದರು. ಸ್ನಾತಕೋತ್ತರ ಪದವೀಧರರು. ವೃತ್ತಿಯಿಂದ ಶಿಕ್ಷಕರು. ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಬಿದ್ರಕಾನ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಪ್ರಸ್ತುತ ನಿವೃತ್ತಿ ಹೊಂದಿದ್ದಾರೆ. 

ಗುಬ್ಬಚ್ಚಿ ಗೂಡು, ಚಿಂವ್ ಚಿಂವ್, ಜೀಕ್ ಜೀಕ್, ಪುಟಾಣಿ ಪುಡಿಕೆ, ಸೊನ್ನೆ ರಾಶಿ ಸೊನ್ನೆ, ತೆರೆಯಿರಿ ಕಣ್ಣು ಖುಷಿಯ ಬೀಜ ಹಾಗೂ ಹಾಡಿನ ಹಕ್ಕಿ - ಮಕ್ಕಳ ಕವನ ಸಂಕಲನ. ಮಿಂಚಿನ ಮರಿ - ಶಿಶುಪ್ರಾಸ ಹೊತ್ತಿಗೆ ಕಪ್ಪೆಯ ಪಯಣ, ಜಿಂಕೆಮರಿ, ಹಸಿರೂರಿನ ಹುಡುಗ, ಮಲ್ಕಾಡೆ ಮಾತಾಡು, ಅಮ್ಮನ ಚಿತ್ರ ಪುಟ್ಟನ ಕೋಳಿ - ಮಕ್ಕಳ ಕತಾ ಸಂಕಲನ. ಮಾತಾಟ ಮಾತೂಟ, ಮರಬಿದ್ದಾಗ, ಎನ್ನುವ ಮಕ್ಕಳಿಗಾಗಿ ಲಲಿತ ಬರಹಗಳನ್ನು, 'ಬಾವಲಿ ಗುಹೆ' - ಮಕ್ಕಳ ಕಾದಂಬರಿ ಹೊರ ತಂದಿದ್ದಾರೆ. 

ಅವರ ಸಾಹಿತ್ಯ ಕೃಷಿಗೆ ಹಸಿರೂರಿನ ಹುಡುಗ ಪುಸ್ತಕಕ್ಕೆ ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮಲ್ನಾಡೆ ಮಾತಾಡು ಕೃತಿಗೆ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಹಾಗೂ ಮರಬಿದ್ದಾಗ ಕೃತಿಗೆ ಬಾಲವಿಕಾಸ ಅಕಾಡೆಮಿ ಕೊಡುವ ಮಕ್ಕಳ ಚಂದ್ರ ಪ್ರಶಸ್ತಿಗಳು ಸಂದಿವೆ. ರಾಜ್ಯ ಶಿಕ್ಷಕರ ಪ್ರಶಸ್ತಿ, ರಾಷ್ಟ್ರ ಶಿಕ್ಷಕರ ಪ್ರಶಸ್ತಿ, ವ್ಯಂಗ್ಯ ಚಿತ್ರ ರಚನೆಗಾಗಿ ರಾಜ್ಯಮಟ್ಟದ ಬಹುಮಾನ, ರಾಜ್ಯಮಟ್ಟದ ವಿಜ್ಞಾನ ಗೋಷ್ಠಿ ಬಹುಮಾನ, ಪ್ರಜಾವಾಣಿ ಶಿಶುಕಾವ್ಯ ಸ್ಪರ್ಧಾ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇಅಲ್ಲದೇ ಅವರ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಬಾಲ ಸಾಹಿತ್ಯ ಪ್ರಶಸ್ತಿಯು ದೊರಕಿರುತ್ತದೆ. 

ತಮ್ಮಣ್ಣ ಬೀಗಾರ

(22 Nov 1959)

Awards

BY THE AUTHOR