About the Author

ತೀ.ನಂ.ಶ್ರೀ ಎಂತಲೇ ಪರಿಚಿತರಾಗಿರುವ ತೀರ್ಥಪುರ ನಂಜುಂಡಯ್ಯನವರ ಮಗ ಶ್ರೀಕಂಠಯ್ಯ ಅವರ ಹುಟ್ಟೂರು ಚಿಕ್ಕನಾಯಕನಹಳ್ಳಿ ಹತ್ತಿರದ ತೀರ್ಥಪುರ. ಮೈಸೂರಿನಲ್ಲಿ ಪದವಿ ಪಡೆದಿದ್ದ ಇವರು ಸಿವಿಲ್ ಸರ್ವೀಸ್ ಪರೀಕ್ಷೆ ಪಾಸು ಮಾಡಿ ಕೇವಲ ಒಂದುವರೆ ತಿಂಗಳು ಮಾತ್ರ ಅಮಾಲ್ದಾರರಾಗಿ ಸೇವೆ ಸಲ್ಲಿಸಿದ್ದ ಅವರು ಕಾಲೇಜಿನ ಅಧ್ಯಾಪಕರಾದರು.

ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಬರೆದ ಕೃತಿಗಳೆಂದರೆ ಒಲುಮೆ, ಹೆಣ್ಣು ಮಕ್ಕಳ ಪದಗಳು, ಬಿಡಿಮುತ್ತು, ಪಂಪ, ನಂಬಿಯಣ್ಣನರಗಳೆ, ರನ್ನನ ಗದಾಯುದ್ಧ ಸಂಗ್ರಹ, ಭಾರತೀಯ ಕಾವ್ಯ ಮೀಮಾಂಸೆ, ಕನ್ನಡ ಮಾಧ್ಯಮ ವ್ಯಾಕರಣ, ರಾಕ್ಷಸನ ಮುದ್ರಿಕೆ, ನಂಟರು ಇವರ ಪ್ರಮುಖ ಕೃತಿಗಳು. ಇವರು ಬರೆದಿರುವ ಭಾರತೀಯ ಕಾವ್ಯ ಮೀಮಾಂಸೆ ಕೃತಿಗೆ ಪಂಪ ಪ್ರಶಸ್ತಿ ದೊರತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ನಿಘಂಟು ಸಮಿತಿಯಲ್ಲಿ ಸಂಪಾದಕರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತೀ.ನಂ.ಶ್ರೀ

(26 Nov 1906-07 Sep 1966)