About the Author

ಪ್ರಾಧ್ಯಾಪಕ, ಸಾಹಿತಿ ವಾಮನ ಬೇಂದ್ರೆ ಅವರ (ಜನನ: 1935 ಜುಲೈ 28 ) ಹುಟ್ಟೂರು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು. ತಂದೆ ದ.ರಾ.ಬೇಂದ್ರೆ, ತಾಯಿ ಲಕ್ಷ್ಮೀಬಾಯಿ. ಪ್ರಾರಂಭಿಕ ಶಿಕ್ಷಣ ಗದಗದಲ್ಲಿ ನೆರವೇರಿತು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವೀಧರರು. ಪುಣೆ ವಿಶ್ವವಿದ್ಯಾಲಯಕ್ಕೆ ‘ಲಕ್ಷ್ಮೀಶನ ಜೈಮಿನಿ ಭಾರತ - ಒಂದು ಅಧ್ಯಯನ ’ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪಡೆದರು. 

ಕನ್ನಡ, ಮರಾಠಿ, ಇಂಗ್ಲಿಷ್, ಹಿಂದಿ ಭಾಷೆಗಳ ಮೇಲೆ ಪ್ರಭುತ್ವವಿತ್ತು. ಸಂಗೀತ, ನಾಟಕ, ಭಾಷಣದಲ್ಲೂ ಆಸಕ್ತಿಯಿದ್ದು, ‘ತೊದಲು’ ಅವರ ಮೊದಲ ಕವನ. ಸಂಕಲನ.   ‘ಕುಶಲಕವಿ ಲಕ್ಷ್ಮೀಶ, ಲಕ್ಷ್ಮೀಶ ಕವಿ-ಕಾವ್ಯ ಪರಂಪರೆ, ಲಕ್ಷ್ಮೀಶ : ಒಂದು ಅಧ್ಯಯನ, ಬೇಂದ್ರೆ ಕಾವ್ಯಲೋಕ, ಬೇಂದ್ರೆ ಬೆಳಕು, ಕವಿಚೂತವನ ಚೈತ್ರ ಲಕ್ಷ್ಮೀಶ. ಜೀವನಚರಿತ್ರೆ- ದ.ರಾ.ಬೇಂದ್ರೆ ಜೀವನ ಪರಿಚಯ’ ಇವು ಪ್ರಮುಖ ಕೃತಿಗಳು.   

‘ಕುಣಿಯೋಣ ಬಾರ, ಅಂಬಿಕಾತನಯ ಹಾಡs ಬೆಳದಿಂಗಳ ನೋಡs, ಅಂಬಿಕಾತನಯ ಹಾಡ್ಯಾನs, ಚೈತನ್ಯದ ಪೂಜೆ, ನಮನ, ದರ್ಶನ, ವಿಕಾಸ, ವಿನ್ಯಾಸ, ತತ್ತ್ವ, ಸಿದ್ಧಾಂತ, ಬೇಂದ್ರೆ ಋತುದರ್ಶನ, ಬೇಂದ್ರೆ ಸಮಗ್ರ ಕಾವ್ಯ ಸಂಪುಟ, ಬೇಂದ್ರೆಯವರ ಜೀವನ ಮಹಾಕಾವ್ಯ ‘ಔದುಂಬರ ಗಾಥೆ’ ಮುಂತಾದ ಕೃತಿಗಳನ್ನು ಸಂಪಾದಿಸಿದ್ದಾರೆ. 

ಅವರ ಸಾಹಿತ್ಯ ಸೇವೆಗೆ ‘ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಿದ್ಯಾರಣ್ಯ ಪ್ರಶಸ್ತಿ, ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕನ್ನಡ-ಮರಾಠಿ ಭಾಷಾ ಬಾಂಧವ್ಯ ಪ್ರಶಸ್ತಿ, ಶ್ರೀವರದರಾಜ ಆದ್ಯ ಸಾಹಿತ್ಯ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ. 2016ರ ಸೆಪ್ಟೆಂಬರ್ ರಂದು ನಿಧನರಾದರು. 

ವಾಮನ ಬೇಂದ್ರೆ

(28 Jul 1935-28 Sep 2016)