About the Author

ವಿಪುಲವಾದ ಕನ್ನಡ ಬರೆವಣಿಗೆಯಿಂದ ಇಡೀ ನಾಡಿನಲ್ಲಿ ಭಾಷಾ ಜಾಗೃತಿಯನ್ನುಂಟುಮಾಡಿದ ಪ್ರಸಿದ್ಧ ಲೇಖಕರಲ್ಲೊಬ್ಬರು ವೆಂಕಟೇಶ ತಿರಕೋ ಕುಲಕರ್ಣಿ. ’ಗಳಗನಾಥ’ ಅವರ ಕಾವ್ಯನಾಮ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗಳಗನಾಥ ಎಂಬ ಹಳ್ಳಿ. ಗಳಗನಾಥರ ಮೊದಲ ಕಾದಂಬರಿ ’ಪದ್ಮನಯನೆಗೆ ಬಹುಮಾನ’. 1898ರಿಂದ 1942ರವರೆಗೆ ಅವ್ಯಾಹತ ಬರವಣಿಗೆಯಲ್ಲಿ ತೊಡಗಿಕೊಂಡವರು. ’ಕಮಲಕುಮಾರಿ, ಮೃಣಾಲಿನಿ, ವೈಭವ, ಕನ್ನಡಿಗರ ಕರ್ಮಕಥೆ’ ಮುಂತಾದ ಕಾದಂಬರಿಗಳ ರಚಿಸಿದ್ಧಾರೆ. ’ಗಿರಿಜಾ ಕಲ್ಯಾಣ, ಉತ್ತರರಾಮ ಚರಿತ್ರೆ, ಚಿದಂಬರ ಚರಿತ್ರೆ ಮುಂತಾದ ಪೌರಾಣಿಕ ಕಥೆಗಳು, ಸತ್ಪುರುಷರ ಚರಿತ್ರೆಗಳು, ನಿಬಂಧ-ಪ್ರಬಂಧಗಳ ರಚನೆ, ಪ್ರಕಟಣೆ. 1907ರಲ್ಲಿ ಸದ್ಬೋಧ ಚಂದ್ರಿಕಾ ಮಾಸಪತ್ರಿಕೆ ಪ್ರಾರಂಭಿಸಿದರು.. ‘ಮಾಧವ ಕರುಣಾವಿಲಾಸ’ ಕಾದಂಬರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ನಿಧಿ ಬಹುಮಾನ. ಇಪ್ಪತ್ತನಾಲ್ಕು ಕಾದಂಬರಿಗಳು, ಒಂಬತ್ತು ಪೌರಾಣಿಕ ಕಥೆಗಳು, ಮೂರು ಸತ್ಪುರುಷರ ಚರಿತ್ರೆಗಳು, ಎಂಟು ನಿಬಂಧ-ಪ್ರಬಂಧ ರಚನೆ. ಅವರು 1942 ಏಪ್ರಿಲ್ 22ರಲ್ಲಿ ನಿಧನರಾದರು.

ಗಳಗನಾಥ (ವೆಂಕಟೇಶ ತಿರಕೋ ಕುಲಕರಣಿ)

(05 Jan 1869-22 Apr 1922)

Books by Author