About the Author

ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1947 ಏಪ್ರಿಲ್‌ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 

ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 

ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಕಡೆಗೊಂಡ್ಲು ಶಂಕರಬಟ್ಟ ಸ್ಮಾರಕ ಕಾವ್ಯ ಪ್ರಶಸ್ತಿ, ಗೊರೂರು ಪ್ರಶಸ್ತಿ, ಮಲ್ಲಿಕಾ ಪ್ರಶಸ್ತಿ ಮುಂತಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 

ಇವರು ಬರೆದ ಪ್ರಮುಖ ಕೃತಿಗಳೆಂದರೆ ತ್ರಿಶಂಕು, ಏನು ಹೇಳಲಿ ಗೆಳೆಯಾ, ಹಾಡೇನ ಪಾಡೇನ, ವಸುಂಧರೆಯ ಪ್ರಾಯ (ಕವನ ಸಂಕಲನ): ಮಾ ನಿಷಾದ, ಅದೇ ಮುಖ, ಕಾಣದ ದಿಕ್ಕಿನತ್ತ, ಒಳದನಿ (ಕಥಾಸಂಕಲನ): ತಪ್ಪಿದ ಹೆಜ್ಜೆಗಳು, ಸೌರಭಸೇತು, (ಕಾದಂಬರಿಗಳು) ಮುಂತಾದವು.

ವಿಜಯಾ ಸುಬ್ಬರಾಜ್

(20 Apr 1947)

Books by Author