About the Author

ವಿಜಯಕಾಂತ ಪಾಟೀಲ- ಹಾನಗಲ್ಲ ತಾಲೂಕಿನ ಕ್ಯಾಸನೂರಿನಲ್ಲಿ 1969 ರ ಅಗಸ್ಟ್ 9ರಂದು ಹುಟ್ಟಿದ್ದು; ಪ್ರಾಥಮಿಕ, ಪ್ರೌಢಶಿಕ್ಷಣ: ಕ್ಯಾಸನೂರು, ಶಕುನವಳ್ಳಿ (ಸೊರಬ); ಪಿಯುಸಿಯಿಂದ ಎಂ.ಎ (ಅರ್ಥಶಾಸ್ತ್ರ), ಎಲ್‌ಎಲ್‌ಬಿ ಧಾರವಾಡ; ಮೈಸೂರು ವಿವಿಯಲ್ಲಿ ಪತ್ರಿಕೋದ್ಯಮ ಡಿಪ್ಲೋಮಾ; ಸದ್ಯ ಹಾನಗಲ್ಲಿನಲ್ಲಿ ನ್ಯಾಯವಾದಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ, ಹಾನಗಲ್ಲಿನ ಕನ್ನಡ ಯುವಜನ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕ. ಪ್ರಕಟಿತ ಕೃತಿಗಳು: ಮಾಸದ ಕಲೆಗಳು (1994), ಸಲಸಲದ ಪಾಡು : (2003), ನೂರು ಬಣ್ಣದ ಕಣ್ಣು (2012), ಹೌದು ನಾನು ಕೌದಿ (2013), ಇಂತಿ ನದಿ (20050)ಕವನ ಸಂಕಲನ. ಪ್ರಬಂಧ: ವಜನುಕಟ್ಟು (2005), ಮಕ್ಕಳ ಸಾಹಿತ್ಯ: ಅಮ್ಮ ಅಂದ್ರೆ ಅಷ್ಟಿಷ್ಟಲ್ಲ-ಕವಿತೆಗಳು (2014) ಹಕ್ಕಿಗಳ ಸ್ವಾತಂತ್ರ್ಯೋತ್ಸವ (2016). ಇತರೆ: ಕನಸಿನ ಹೊಸ ಅಧ್ಯಾಯ (ಸಂಪಾದಿತ ಕತೆಗಳು-2005 ), ಒಂದು ಹಿಡಿ ಮುತ್ತು (ಸಂದರ್ಶನ ಲೇಖನಗಳು- 2008), ಸದಾ ಹರಿವು ಕನ್ನಡ (ಭಾವಗೀತೆಗಳ ಧ್ವನಿಮುದ್ರಿಕೆ-2015). ಪ್ರಶಸ್ತಿ/ಬಹುಮಾನ/ಗೌರವ: ಬೇಂದ್ರೆ-ಅಡಿಗೆ ಕಾವ್ಯ ಪ್ರಶಸ್ತಿ, ಕಯ್ಯಾರ ಕಿಞ್ಞಣ್ಣ ರೈ ಕಾವ್ಯ ಪ್ರಶಸ್ತಿ; ಸಂಕ್ರಮಣ, ಸಂಚಯ, ಪ್ರಜಾವಾಣಿ, ಜಿಲ್ಲಾ ಕಸಾಪ ಮೊದಲಾದವುಗಳು ಏರ್ಪಡಿಸಿದ ಕಾವ್ಯ ಸ್ಪರ್ಧೆಯ ಬಹುಮಾನಗಳು. ಹಾನಗಲ್ ತಾಲ್ಲೂಕು ಮೊದಲ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷತೆ (2011)

ವಿಜಯಕಾಂತ ಪಾಟೀಲ

(09 Aug 1969)