About the Author

ಮಲೆನಾಡಿನ ಕೊಪ್ಪ ತಾಲೂಕಿನ ಹುಲಿಯಾಳಿ ಗ್ರಾಮದ ವಿಶ್ವಾಸ ಅವರು ಸಂಸ್ಕೃತ ವಿದ್ವಾಂಸರು. ಎಂ.ಎ. ಮತ್ತು ಪಿ.ಹೆಚ್.ಡಿ. ಪದವೀಧರರು. ಸಂಸ್ಕೃತ - ಕನ್ನಡ ಎರಡೂ ಭಾಷೆಗಳಲ್ಲಿ ಕೃಷಿ ಮಾಡಿದ್ದಾರೆ. ಎಸ್. ಎಲ್. ಭೈರಪ್ಪನವರ ‘ಆವರಣ’ ಕಾದಂಬರಿಯ ಸಂಸ್ಕೃತ ಅನುವಾದಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ, ‘ದಾಟು’ ಕಾದಂಬರಿಯ ಸಂಸ್ಕೃತ ಅನುವಾದಕ್ಕಾಗಿ ಉತ್ತರಪ್ರದೇಶ ಸಂಸ್ಕೃತ ಅಕಾಡೆಮಿ ಹಾಗೂ ಸಂಸ್ಕೃತದಲ್ಲಿ ಬಾಲಸಾಹಿತ್ಯಕ್ಕಾಗಿಯೂ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದಲೂ ಪುರಸ್ಕೃತರಾಗಿದ್ದಾರೆ. ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ‘ವಾಚಸ್ಪತಿ’ (ಡಿ.ಲಿಟ್) ಪದವೀಧರರು.

ಸಾಹಿತಿ ಎಚ್. ಆರ್. ವಿಶ್ವಾಸ ಪ್ರಸ್ತುತ ಮಂಗಳೂರಿನ ಸಂಘನಿಕೇತನದಲ್ಲಿ  ಅಖಿಲ ಭಾರತ ಪ್ರಶಿಕ್ಷಣ ಪ್ರಮುಖರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಿಎಚ್.ಡಿ. ಪದವೀಧರರು. ಕನ್ನಡರತ್ನ ಮತ್ತು ರಾಷ್ಟ್ರಭಾಷಾ ಪ್ರವೀಣ ಪರೀಕ್ಷೆಗಳನ್ನು ಪಾಸ್ ಮಾಡಿ ಬಹುಭಾಷಾ ಸಾಹಿತ್ಯ ವಿಹಾರಿಯಾಗಿದ್ದಾರೆ.ಲಖನೋದ ಭಾವೂರಾವ್ ದೇವರಸ್ ನ್ಯಾಸದಿಂದ ಯುವ ಸಾಹಿತ್ಯಕಾರ ಪುರಸ್ಕಾರ ಪಡೆದಿದ್ದು,  ಸಂಸ್ಕೃತದಲ್ಲಿ 16 ಕೃತಿಗಳನ್ನು ಪ್ರಕಟಿಸಿದ್ದಾರೆ. ಮೂಲ (ಕಾದಂಬರಿ),  ಧ್ವನಿ, ಮತ್ತೆ ಹೊತ್ತಿತು ಹೀಬ್ರೂ ಹಣತೆ, ಆರನೆಯ ಇಂದ್ರಿಯ (ಸಣ್ಣಕತೆಗಳ ಸಂಕಲನ), ಸ್ಮೃತಿಪಥ (ನೆನಪಿನ ಚಿತ್ರಗಳು) ಅವರ ಪ್ರಮುಖ ಕೃತಿಗಳು. 

ಇವರ ಇಪ್ಪತ್ತೇಳಕ್ಕೂ ಹೆಚ್ಚು ಕೃತಿಗಳು ಬೆಳಕು ಕಂಡಿವೆ.

ವಿಶ್ವಾಸ

(01 Mar 1959)