`ಆವರ್ತ' ತಾತ್ವಿಕ ಚಿಂತನೆಯುಳ್ಳ ಬೃಹತ್ ಕಾದಂಬರಿ. ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳ ಸುಳಿಯಲ್ಲಿ ಸಿಕ್ಕಿಕೊಂಡು ತೊಳಲಾಡುವ, ಬಿಡಿಸಿಕೊಳ್ಳಲು ಯತ್ನಿಸುವ, ಕಡೆಗೆ ಒಳಗಿದ್ದೂ ಇರದ ಹದವನ್ನು ಕಂಡುಕೊಳ್ಳುವ ವ್ಯಕ್ತಿಯೊಬ್ಬನ ಬದುಕಿನ ಚಿತ್ರಣ ಈ ಕಾದಂಬರಿಯ ಕಥಾ ವಸ್ತು. ಪುರಾಣ ಮತ್ತು ವರ್ತಮಾನವನ್ನು ಒಂದು ಕೂಡುಬಿಂದುವಿನಲ್ಲಿ ನಿಲ್ಲಿಸಿ ನೋಡಿದ ಈ ಕಾದಂಬರಿಯ ತಂತ್ರ ಕನ್ನಡಕ್ಕೆ ಹೊಸಬಗೆಯದು ಎನ್ನಬಹುದು. 2014 ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಅದೇ ವರ್ಷ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕಾದಂಬರಿಗಾರ್ತಿಯಾದ ಆಶಾ ರಘುರವರು ಹುಟ್ಟಿದ್ದು 1979ರ ಜೂನ್ 18 ನೇ ತಾರೀಖಿನಂದು. ಬೆಂಗಳೂರಿನವರೇ ಆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ಇದೀಗ ಪೂರ್ಣ ಪ್ರಮಾಣದಲ್ಲಿ ಸಾಹಿತ್ಯ ಕೃಷಿಯಲ್ಲಿಯೇ ತೊಡಗಿಸಿಕೊಂಡಿದ್ದಾರೆ. 'ಆವರ್ತ', 'ಗತ', 'ಮಾಯೆ', 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು', 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ...
READ MORE