ಹಿರಿಯ ಲೇಖಕ ಬಿ. ಪುಟ್ಟಸ್ವಾಮಯ್ಯ ಅವರು ಬರೆದ ಕಾದಂಬರಿ-ಅಭಿಸಾರಿಕೆ. ಕಥಾನಾಯಕಿ ಲತಾಂಗಿಯ ಜೀವನ ವೃತ್ತಾಂತದ ಸುತ್ತ ಕಾದಂಬರಿ ಸಾಗುತ್ತದೆ. ಆಕೆಯ ಉದ್ಯೋಗ, ವ್ಯಕ್ತಿಗತ ಜೀವನ, ಉದ್ಯೋಗದಲ್ಲಿಯ ಕಿರಿಕಿರಿ, ಯಾವುದನ್ನೂ ನಿರ್ಲಕ್ಷಿಸದ ಅನಿವಾರ್ಯತೆ, ಈ ಮಧ್ಯೆ ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುವುದು ಎಲ್ಲವೂ ಕಾದಂಬರಿಯ ಕುತೂಹಲದ ಅಂಶಗಳಾಗುತ್ತವೆ.
ಕನ್ನಡ ನಾಟಕ ಸಾಹಿತ್ಯ ಮತ್ತು ಕಾದಂಬರಿ ಲೋಕಕ್ಕೆ ತಮ್ಮ ವಿಶಿಷ್ಟ ಕೊಡುಗೆಗಳ ಮೂಲಕ ಗಮನ ಸೆಳೆದವರು ಬಿ. ಪುಟ್ಟಸ್ವಾಮಯ್ಯ. ಪತ್ರಿಕೋದ್ಯಮಿ, ನಾಟಕಕಾರ, ಕಾದಂಬರಿಕಾರ, ಕಥೆಗಾರ, ಕವಿಯಾಗಿ ಅನುಪಮ ಕೊಡುಗೆ ನೀಡಿದ ಪುಟ್ಟಸ್ವಾಮಯ್ಯ ಅವರು ಹುಟ್ಟಿ ಬೆಳೆದದ್ದು ಬೆಂಗಳೂರಿನಲ್ಲಿ. 1897ರ ಮೇ 27ರಂದು ಜನಿಸಿದ ಪುಟ್ಟಸ್ವಾಮಿ ಅವರ ತಂದೆ ಬಸಪ್ಪಯವರು ರೇಷ್ಮೆ ವ್ಯಾಪಾರಿಯಾಗಿದ್ದರು. ತಾಯಿ ಬಸಮ್ಮ. ಬೆಂಗಳೂರಿನ ಸುಲ್ತಾನ್ಪೇಟೆ ಹಿಂದೂ ಎ.ವಿ. ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪಡೆದರು. ನಂತರ ಹೆಚ್ಚಿನ ಅಧ್ಯಯನಕ್ಕಾಗಿ ಸೈಂಟ್ ಜೋಸೆಫ್ ಕಾಲೇಜ್ ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ ತಂದೆಯವರನ್ನು ಕಳೆದುಕೊಂಡದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಯಿತು. ಅದರಿಂದಾಗಿ ...
READ MORE