ಲೇಖಕ ನಿಡುಸಾಲೆ ಪುಟ್ಟಸ್ವಾಮಯ್ಯ ಅವರ ಸಾಮಾಜಿಕ ಕಾದಂಬರಿ ‘ಅಗ್ನಿದಿವ್ಯ. ಹೆಚ್ಚು ಮಾತಿಲ್ಲದ ಕೇವಲ ಭಾವ ತುಂಬಿದ ಕಣ್ಣುಗಳಲ್ಲೇ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಕಾದಂಬರಿಯ ಪ್ರಮುಖ ದಂಪತಿಯ ಜೀವನ ಮಾದರಿ. ಇದು ಪ್ರಬುದ್ಧ ಮನಸ್ಸಿನ ಸಂಕೇತ ಎಂದು ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಅವರು ಕೃತಿಗೆ ಬರೆದ ಬೆನ್ನುಡಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಬೆನ್ನುಡಿ ಬರೆದ ಮತ್ತೊಬ್ಬ ಸಾಹಿತಿ ಎಂ. ವೆಂಕಟಸ್ವಾಮಿ ‘ಹಳ್ಳಿಗಾಡಿನಿಂದ ಬಂದ ದಂಪತಿಯ ಸಹನಶೀಲ ಗುಣ ಅನುಕರಣೀಯ ಎಂದು ಪ್ರಶಂಸಿಸಿದ್ದಾರೆ.
ಕಾವ್ಯವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಲೇಖಕ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಿಡಸಾಲೆ (ಜನನ: 05-02-1951) ಗ್ರಾಮದವರು. ತಂದೆ- ಮುಳವಾಗಲಯ್ಯ, ತಾಯಿ- ನಿಂಗಮ್ಮ. ನಿಡಸಾಲೆಯಲ್ಲಿ ಪ್ರಾಥಮಿಕ, ಹುಲಿಯೂರುದುರ್ಗದಲ್ಲಿ ಪ್ರೌಢಶಾಲೆಯವರೆಗೆ ವ್ಯಾಸಂಗ ಪೂರ್ಣಗೊಳಿಸಿದರು. 1968ರಲ್ಲಿ ಬೆಂಗಳೂರಿನ ಐ.ಟಿ.ಐ.ನಲ್ಲಿ ತರಬೇತಿ ಪಡೆದು, 1969ರಿಂದ ಕೃಷಿ ಇಲಾಖೆಯಲ್ಲಿ ಉದ್ಯೋಗ ಆರಂಭಿಸಿದರು. ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಪಿ.ಯು.ಸಿ ತೇರ್ಗಡೆ ಯಾಗಿ ಬಿ.ಕಾಂ.ಗೆ ಸೇರ್ಪಡೆಯಾದರು. ಹಿರಿಯ ಸಾಹಿತಿ ಬಿ.ಜಿ. ಸತ್ಯಮೂರ್ತಿಯವರ ಒಡನಾಟದಲ್ಲಿ 1971ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಅವರು ಸಣ್ಣ ಕಥೆ, ನಾಟಕ, ಕಾದಂಬರಿ ಸೇರಿದಂತೆ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿದ್ದಾರೆ. ಕೃತಿಗಳು: ಗೊಲ್ಲಳ್ಳಿ ತೋಟ’, ‘ಸಾಧನೆಯ ...
READ MORE