ಅಕ್ಷರದವ್ವ

Author : ಕೆ. ನೀಲಾ

Pages 124

₹ 120.00




Year of Publication: 2017
Published by: ಪ್ರಜ್ಞಾ ಕಾನೂನು ಸಲಹಾ ಸಮಿತಿ
Address: # 242, ಜಿಡಿಎ ಲೇಔಟ್, ವೀರೇಂದ್ರ ಪಾಟೀಲ್ ನಗರ, ಸೇಡಂ ರಸ್ತೆ ಕಲಬುರಗಿ-585105
Phone: 9448778796

Synopsys

ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಕುರಿತ ಲೇಖನಗಳನ್ನು ಸಂಗ್ರಹಿಸಿ ಸಂಪಾದಿಸಿದ ಪುಸ್ತಕ ಅಕ್ಷರದವ್ವ. ಈ ಸಂಕಲನವನ್ನು ಕೆ. ನೀಲಾ ಅವರು ಸಂಪಾದಿಸಿದ್ದಾರೆ.

ಈ ಪುಸ್ತಕದಲ್ಲಿ ಸಾವಿತ್ರಿಬಾಯಿ ಫುಲೆರವರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದಕ್ಕಾಗಿ ಮಾಡಿದ ಸಂಘರ್ಷದ ಬದುಕಿನ ಬಗ್ಗೆ  ಹಾಗೂ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾದ ಮಹಿಳೆಯರಿಗಾಗಿ ತೊಟ್ಟಿಲ ಮನೆ ತೆರೆದು ಅನ್ಯಾಯಕ್ಕೆ ಒಳಗಾದ ಮಹಿಳೆರಿಗೆ ಆಶ್ರಯ ನೀಡಿದರ ಬಗ್ಗೆ, ಮತ್ತು  ಎಲ್ಲಾ ಸಮುದಾಯದ ಹೆಣ್ಣು ಮಕ್ಕಳಿಗೆ ಸಮಾನ ಶಿಕ್ಷಣ ಸಿಗಬೇಕೆಂದು ಮೊಟ್ಟ ಮೊದಲ ಬಾರಿಗೆ ಹೆಣ್ಣು ಮಕ್ಕಳ ಶಾಲೆಯನ್ನು ತೆರೆದಿರುವ ಕುರಿತು ವಿವಿಧ ಲೇಖಕರು  ಬರೆದ ಲೇಖನಗಳನ್ನು ಸಂಗ್ರಹಿಸಿ ಸಂಪಾದಿಸಿದ ಉತ್ತಮವಾದ ಪುಸ್ತಕ ಅಕ್ಷರದವ್ವ.

 

About the Author

ಕೆ. ನೀಲಾ
(01 August 1966)

ಕರ್ನಾಟಕದ ಪ್ರಮುಖ ಹೋರಾಟಗಾರ್ತಿ ಕೆ. ನೀಲಾ ಅವರು ಕನ್ನಡದ ಕಥೆಗಾರರಲ್ಲಿ ಒಬ್ಬರು. ನೀಲಾ ಅವರು 1966ರ ಆಗಸ್ಟ್ 1 ರಂದು ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ಓದು, ಬರಹದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಇವರ ಕತೆ, ಕವನ, ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.  ತೊಗರಿ ಬೆಳೆಗೆ ಬೆಂಬಲ ಬೆಲೆ ಸಿಗಬೇಕೆಂದು ರೈತಪರ ಹೋರಾಟದಲ್ಲಿ ಜೈಲು ಸೇರಿದಾಗ ಬರೆದ ಬದುಕು ಬಂದೀಖಾನೆ ಕೃತಿಯು ಜೈಲಿನ ಕಥನ ಒಳಗೊಂಡಿದೆ. ಮಹಿಳೆ- ಸಮಸ್ಯೆ ಸವಾಲುಗಳು  ಪ್ರಚಾರೋಪನ್ಯಾಸ ಮಾಲೆಯ ಕಿರು ಹೊತ್ತಿಗೆ, ಜ್ಯೋತಿಯೊಳಗಣ ಕಾಂತಿ, ತಿಪ್ಪೆಯನರಸಿ ಮತ್ತು ಇತರ ಕತೆಗಳು ಎಂಬ ...

READ MORE

Related Books