ಅಲೆಗಳಲ್ಲಿ ರಾಜಹಂಸ

Author : ಸಿದ್ಧಲಿಂಗ ಪಟ್ಟಣಶೆಟ್ಟಿ

Pages 82

₹ 12.00




Year of Publication: 1988
Published by: ಅನನ್ಯ ಪ್ರಕಾಶನ, ಧಾರವಾಡ
Address: ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-4
Phone: 08362462718

Synopsys

ಹೆಸರಾಂತ ಹಿಂದಿ ನಾಟಕಕಾರ ಮೋಹನ್‌ ರಾಕೇಶ್‌ ಅವರ ಹಿಂದಿ ನಾಟಕದ ಅನುವಾದ. ಕಾವ್ಯಾತ್ಮಕ ಭಾಷೆ, ಸೊಗಸಾದ ಮಾತುಗಳ ಮೂಲಕ ಗಮನ ಸೆಳೆಯುತ್ತದೆ. ಮೋಹನ್‌ ರಾಕೇಶ್‌ ಅವರ ಈ ಮಹತ್ವದ ನಾಟಕದ ಕನ್ನಡ ಅನುವಾದ ಓದುವಾಗ ಇದು ಅನುವಾದ ಎಂದು ಅನ್ನಿಸುವುದೇ ಇಲ್ಲ. ಕನ್ನಡದ್ದೇ ಎನ್ನುವ ಹಾಗೆ ಕನ್ನಡೀಕರಿಸಿದ ಪಟ್ಟಣಶೆಟ್ಟರು ಅಭಿನಂದನಾರ್ಹರು.

About the Author

ಸಿದ್ಧಲಿಂಗ ಪಟ್ಟಣಶೆಟ್ಟಿ
(03 November 1939)

ಕವಿ-ಅನುವಾದಕ-ಅಂಕಣಕಾರರಾಗಿ ಚಿರಪರಿಚಿತರಿರುವ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಜನಿಸಿದ್ದು 1939ರ ನವಂಬರ್ ೩ರಂದು. ಧಾರವಾಡ ಸಮೀಪದ ಯಾದವಾಡ ಎಂಬ ಹಳ್ಳಿಯಲ್ಲಿ ಜನಿಸಿದ ಅವರು ಒಂದೂವರೆ ವರ್ಷದವರಿರುವಾಗಲೇ ತಂದೆಯನ್ನು ಕಳೆದುಕೊಂಡರು. ಕಡು ಬಡತನದಿಂದಾಗಿ ತಾಯಿಯ ತವರು ಮನೆ ಮನಗುಂಡಿ ಸೇರಿದರು. ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಶಿಕ್ಷಣ ಮುಂದುವರಿಸುವ ದೃಢ ಸಂಕಲ್ಪದಿಂದ ತಾಯಿಯೊಂದಿಗೆ ಮತ್ತೆ ಧಾರವಾಡಕ್ಕೆ ಬಂದ ಅವರು  ಹಿಂದೀ ಎಂ.ಎ., ಪಿಎಚ್.ಡಿ. ಪದವಿಗಳನ್ನು ಪಡೆದರು. ಒಂದು ವರ್ಷ ಹೈಸ್ಕೂಲ್ ಶಿಕ್ಷಕ, ಒಂದು ವರ್ಷ ಶಿರಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, 1966 ರಿಂದ 1999ರ ವರೆಗೆ ಕರ್ನಾಟಕ ...

READ MORE

Related Books