ಎಂ. ಗೋಪಾಲಕೃಷ್ಣ ಅಡಿಗರು ಬರೆದ ಕಾದಂಬರಿ-ಅನಾಥೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಲ ತೀರ ಪ್ರದೇಶಕ್ಕೆ ಸಂಬಂಧಿಸಿದ ಕಥೆ ಇದು. ಸಂಸಾರ ಸುಖದಿಂದ ವಂಚಿತಳಾದ ಒಂದು ಹೆಣ್ಣಿನ ಕಥೆ ಇದು. ಆ ಹೆಣ್ಣಿನ ಮನಸ್ಸನ್ನು ಸೂಕ್ಷ್ಮವಾಗಿ ವಿಶ್ಲೇಷಣೆಗೆ ಗುರಿಪಡಿಸುವ ಘಟನೆ-ಸನ್ನಿವೇಶಗಳು ಅತ್ಯಂತ ಸೂಕ್ಷ್ಮವಾಗಿ ಓದುಗರನ್ನು ತಟ್ಟುತ್ತವೆ. ಇಡೀ ಕಥೆಯು ಭಾವನಾತ್ಮಕವಾಗಿ ಓದುಗರನ್ನು ಸೆಳೆಯುತ್ತದೆ.
ಕನ್ನಡದಲ್ಲಿ ನವ್ಯಕಾವ್ಯಕ್ಕೆ ನಾಂದಿ ಹಾಡಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರನ್ನು ‘ಒಂದು ಜನಾಂಗದ ಕಣ್ಣು ತೆರೆಸಿದ ಕವಿ’ ಎಂದು ಗುರುತಿಸಲಾಗುತ್ತಿತ್ತು. ಅಡಿಗರು 1918ರ ಫೆಬ್ರುವರಿ 18ರಂದು ಜನಿಸಿದರು. ತಂದೆ ರಾಮಪ್ಪ ಮತ್ತು ತಾಯಿ ಗೌರಮ್ಮ. ಬೈಂದೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಆಯಿತು. ಬಿ.ಎ. ಆನರ್ಸ್ ಪದವಿ (1942) ಗಳಿಸಿದ ನಂತರ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ್ದರು. ಆಮೇಲೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ (1947) ಗಳಿಸಿದರು. ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕ (1948-52), ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ (1952-54) ...
READ MORE