ಅನಂತದೆಡೆಗೆ

Author : ನಾ. ಸೋಮೇಶ್ವರ

Pages 192

₹ 180.00




Year of Publication: 2013
Published by: ಸಾವಣ್ಣ ಎಂಟರ್ ಪ್ರೈಸಸ್
Address: (ಎ ಯುನಿಟ್ ಆಫ್ ಐ.ಪಿ.ಎಸ್) ನಂ.57, 1ನೇ ಮಹಡಿ, ಪುಟ್ಟಣ್ಣ ರಸ್ತೆ, ಬಸವನಗುಡಿ, ಬೆಂಗಳೂರು-560004
Phone: 8026607011/9845224979

Synopsys

ಕಥೆಗಳ ಮೂಲಕ ಕಲಿಸುವ ಮತ್ತು ಚಿಂತನೆಗೆ ತೊಡಗಿಸುವ ಕೃತಿಯಿದು. ವ್ಯಕ್ತಿತ್ವ ವಿಕಾಸವೇ ಈ ಕೃತಿ ಉದ್ದೇಶ. ಇದರಲ್ಲಿ ಒಟ್ಟು ಐವತ್ತು ಕಥೆಗಳಿವೆ. ಪ್ರತಿಯೊಂದು ಕಥೆಯೂ ಒಂದೆರಡು ಪುಟಗಳಲ್ಲಿದೆ. ಕಥೆ, ಕಥೆಯ ಮೂಲಕ ಕಲಿಕೆಗಾಗಿ ಮೂರ್‍ನಾಲ್ಕು ವಾಕ್ಯಗಳ ಆಶಯ ಸೂಚಿ ಒದಗಿಸಲಾಗಿದೆ. ಓದುತ್ತಲೇ ಓದುಗರ ಅನುಭವಗಳ ಹಂಚಿಕೆ ಹಾಗೂ ಆತ್ಮಾವಲೋಕನಕ್ಕಾಗಿ ಕೆಲವು ಪ್ರಶ್ನೆಗಳನ್ನು ನೀಡಲಾಗಿದೆ. ಇಲ್ಲಿನ ಪ್ರತಿ ಬರಹವು ಮಕ್ಕಳಿಗೆ, ಹದಿಹರೆಯದವರಿಗೆ ಹೆಚ್ಚು ಉಪಯುಕ್ತವಾಗಿದೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books