ಅಂತು

Author : ಪ್ರಕಾಶ್ ನಾಯಕ್

Pages 216

₹ 200.00




Year of Publication: 2020
Published by: ಛಂದ ಪುಸ್ತಕ
Address: ಐ-004, ಮಂತ್ರಿಪ್ಯಾರಡೈಸ್‌ ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076
Phone: 9844422782

Synopsys

ಲೇಖಕ ಪ್ರಕಾಶ ನಾಯಕ ಅವರ ಕಾದಂಬರಿ-ಅಂತು. ಕೃತಿಗೆ ಬೆನ್ನುಡಿ ಬರೆದಿರುವ ಟಿ. ಪಿ. ಅಶೋಕ “‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾರ್ಪೋರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರಿ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ” ಎಂದು ಶ್ಲಾಘಿಸಿದ್ದಾರೆ.

About the Author

ಪ್ರಕಾಶ್ ನಾಯಕ್

ಲೇಖಕ, ಕಾದಂಬರಿಕಾರ ಪ್ರಕಾಶ್ ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ ಹನೇಹಳ್ಳಿಯವರು. ಓದಿದ್ದು ಇಲೆಕ್ಟ್ರಿಕಲ್ ಇಂಜಿನಿಯರಿಂಗ್‌ ಆದರೂ ಸಾಹಿತ್ಯಾಸಕ್ತರು. ಪ್ರಸ್ತುತ ಅಮೇರಿಕೆಯಲ್ಲಿನ ಉತ್ತರ ಕ್ಯಾಲಿಫೋರ್ನಿಯಾದ ಕುಪರ್ಟಿನೋದಲ್ಲಿ ವಾಸ. ಸಾಂತಾ ಕ್ಲಾರಾದಲ್ಲಿನ ಮಾರ್ವೆಲ್ ಸೆಮಿಕಂಡಕ್ಟರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಮೇರಿಕೆಯಲ್ಲಿನ ಕನ್ನಡ ಕೂಟ, ಅಕ್ಕ, ಕನ್ನಡ ಸಾಹಿತ್ಯ ರಂಗಗಳ ಪ್ರಕಟಣೆಯಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ‘ಅಮೂರ್ತ ಚಿತ್ತ’ ಇವರ ಪ್ರಕಟಿತ ಕಥಾಸಂಕಲನ. ‘Albert Camusನ The Stranger’ ಎಂಬ ಆಂಗ್ಲಾದ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಹಲವಾರು ಕಥೆಗಳು ಕನ್ನಡದ ಪ್ರಮುಖ ನಿಯತಕಾಲಿಕಗಳಲ್ಲಿ ಪ್ರಕಟವಾಗಿದ್ದು ‘ಅಂತು’ ಕಾದಂಬರಿ ಛಂದ ...

READ MORE

Related Books