ಅವಿರಳಜ್ಞಾನಿ ಚನ್ನಬಸವಣ್ಣ

Author : ಎಚ್‌. ತಿಪ್ಪೇರುದ್ರಸ್ವಾಮಿ

Pages 188

₹ 160.00




Year of Publication: 2016
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು-570004

Synopsys

ಹನ್ನೆರಡನೆಯ ಶತಮಾನದ ವಚನ ಚಳವಳಿಯ ಪ್ರಮುಖರಲ್ಲಿ ಒಬ್ಬ ಚೆನ್ನಬಸವಣ್ಣ. ಶರಣ ಸಾಹಿತ್ಯದಲ್ಲಿ ಚೆನ್ನಬಸವಣ್ಣನಿಗೆ ಪ್ರಮುಖ ಸ್ಥಾನವಿದೆ. ಅಣ್ಣ ಬಸವಣ್ಣನ ಸೋದರಳಿಯನಾದ ಚೆನ್ನಬಸವಣ್ಣ ವಚನ ರಚನೆಯಲ್ಲಿ ತೊಡಗಿದವರಲ್ಲಿ ಅತ್ಯಂತ ಕಿರಿಯ ವಯಸ್ಸಿನವ. ಚೆನ್ನಬಸವಣ್ಣನವರ ಬದುಕನ್ನು ಕೇಂದ್ರವಾಗಿಟ್ಟುಕೊಂಡು ರಚಿತವಾದ ಕಾದಂಬರಿಯಿದು. ಶರಣರ ಬದುಕನ್ನು ಕಾದಂಬರಿ ಪ್ರಕಾರಕ್ಕೆ ಅಳವಡಿಸಿ, ಯಶಸ್ವಿಯಾದ ಎಚ್‌. ತಿಪ್ಪೇರುದ್ರಸ್ವಾಮಿ ಅವರು ಈ ಕಾದಂಬರಿಯನ್ನೂ ಬರೆದು ಪ್ರಕಟಿಸಿದ್ದಾರೆ.

 

About the Author

ಎಚ್‌. ತಿಪ್ಪೇರುದ್ರಸ್ವಾಮಿ
(03 February 1928 - 28 October 1994)

ಶರಣರನ್ನು ಕುರಿತು ಕಾದಂಬರಿ ರಚಿಸುವ ಮೂಲಕ ಜನಪ್ರಿಯರಾಗಿರುವ ಎಚ್. ತಿಪ್ಪೇರುದ್ರಸ್ವಾಮಿ ಅವರು ಕರ್ನಾಟಕದ ಸಂಸ್ಕೃತಿಯ ಬಗ್ಗೆ ಆಳವಾದ ಅಧ್ಯಯನ ನಡೆಸಿದವರು. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯವರಾದ ತಿಪ್ಪೇರುದ್ರಸ್ವಾಮಿ ಜನಿಸಿದ್ದು 1928ರ ಫೆಬ್ರುವರಿ 3ರಂದು. ತಂದೆ ಚೆನ್ನಮಲ್ಲಯ್ಯ, ತಾಯಿ ಬಸಮ್ಮ. ಹೊನ್ನಾಳಿ, ಶಿರಾಳಕೊಪ್ಪ ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಆರಂಭಿಕ ಶಿಕ್ಷಣ ಪಡೆದ ತಿಪ್ಪೇರುದ್ರಸ್ವಾಮಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕದೊಂದಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ (ಎಂ.ಎ.) ಪಡೆದರು. ಶರಣರ ಅನುಭಾವ ಪ್ರಪಂಚ ಮಹಾಪ್ರಬಂಧಕ್ಕೆ ಡಾಕ್ಟೊರೇಟ್‌ ಪದವಿ (1962) ಪಡೆದರು. ಹಾಸನದ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ತಿಪ್ಪೇರುದ್ರಸ್ವಾಮಿ ...

READ MORE

Related Books