ಬದುಕಲು ಬೇಕು ಬದುಕುವ ಈ ಮಾತು

Author : ಪಾಟೀಲ ಪುಟ್ಟಪ್ಪ

Pages 88

₹ 30.00




Year of Publication: 2012
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ

Synopsys

ಖ್ಯಾತ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಅವರ ಕೃತಿ-ಬದುಕಲು ಬೇಕು ಬದುಕುವ ಈ ಮಾತು. ತಮ್ಮ ಪ್ರಪಂಚ ಎಂಬ ವಾರಪತ್ರಿಕೆಯಲ್ಲಿ ಬರೆಯುತ್ತಿದ್ದ ಅನುಭವಿಕ ಮಾತುಗಳು ಅಥವಾ ವಿಚಾರಗಳನ್ನು ಸಂಗ್ರಹಿಸಿ, ಸಂಪಾದಿಸಿ ನೀಡಿದ್ದೇ ಈ ಕೃತಿಯ ಹೆಗ್ಗಳಿಕೆ. ತಮ್ಮ ಅನುಭವ-ಅಧ್ಯಯನ-ಘಟನೆಗಳ ಮೂಲಕ ಕಂಡುಕೊಂಡ ವಿಚಾರಗಳನ್ನು ಅಷ್ಟೇ ಪರಿಣಾಮಕಾರಿಯಾಗಿ ಬಿಂಬಿಸಿದ್ದು, ಓದುಗರಲ್ಲಿ ಇಲ್ಲಿಯ ವಿಚಾರಗಳು ಸಂತೃಪ್ತಿಯ ಭಾವನೆ ಮೂಡಿಸುತ್ತವೆ.

About the Author

ಪಾಟೀಲ ಪುಟ್ಟಪ್ಪ
(14 January 1922 - 16 March 2020)

`ಪಾಪು’ ಎಂದೇ ಚಿರಪರಿಚಿತರಿರುವ ಪಾಟೀಲ ಪುಟ್ಟಪ್ಪ ಅವರು ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡವರು. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದವರು. ತಂದೆ ಸಿದ್ಧಲಿಂಗಪ್ಪ-ತಾಯಿ ಮಲ್ಲಮ್ಮ. 1922ರ ಜನೆವರಿ 4ರಂದು ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎಂ.ಎಂ.ಬಿ. ವ್ಯಾಸಂಗ ಮಾಡಿದರು. 1949ರಲ್ಲಿ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಎಂ.ಎಫ್.ಪಿ ಪದವಿ ಗಳಿಸಿದರು. ‘ವಿಶಾಲ ಕರ್ನಾಟಕ’ ಪತ್ರಿಕೆ ಸಂಪಾದಕರಾಗಿ ಕೆಲಸಮಾಡಿದ ಪುಟ್ಟಪ್ಪನವರು ಕ್ಯಾಲಿಫೋರ್ನಿಯಾಗೆ ಹೋಗಿ ಬಂದ ಮೇಲೆ ‘ನವಯುಗ’ ಮಾಸಪತ್ರಿಕೆ ...

READ MORE

Related Books