ಬದುಕೇ ಭಗವಂತ

Author : ಡಿ.ಎಸ್. ಶ್ರೀನಿವಾಸ್ ಪ್ರಸಾದ್

Pages 152

₹ 170.00




Year of Publication: 2022
Published by: ವೀರಲೋಕ ಪ್ರಕಾಶನ
Phone: 7022122121

Synopsys

ಡಿ.ಎಸ್. ಶ್ರೀನಿವಾಸ್ ಪ್ರಸಾದ್ ಅವರ ಬದುಕೇ ಭಗವಂತ . ಕೃತಿಯ ಉಪಶೀರ್ಷಿಕೆಯಲ್ಲಿ ಇರುವಿಕೆ ಕಾಣಬೇಕು, ಇಲ್ಲದಿರುವಿಕೆ ಕಾಡಬೇಕು ಎಂಬುದಾಗಿದೆ. ಕೃತಿಯಲ್ಲಿ ಪ್ರಣಯರಾಜ ಶ್ರೀನಾಥ್ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಅವರು ಹೇಳುವಂತೆ, ಬದುಕೇ ಭಗವಂತ ಎಂಬ ಶೀರ್ಷಿಕೆ ಬಹಳ ಚೆನ್ನಾಗಿದೆ. ನಮ್ಮ ನಮ್ಮ ಬದುಕಿನಲ್ಲೇ ಭಗವಂತನನ್ನು ನೋಡಲು ಸಾಧ್ಯವಿದೆ. ಭಾಷೆ, ಕುಲ, ಧರ್ಮ ಎಲ್ಲವನ್ನೂ ಮೀರಿರುವ ಬದುಕು ನಿಜವಾಗಿಯೂ ಪರಮಾತ್ಮ ಸ್ವರೂಪವೇ ಎಂಬುದಾಗಿ ಹೇಳಿದ್ದಾರೆ.

About the Author

ಡಿ.ಎಸ್. ಶ್ರೀನಿವಾಸ್ ಪ್ರಸಾದ್

ಬೆಂಗಳೂರು ಮೂಲದವರಾದ ಲೇಖಕ ಡಿ.ಎಸ್. ಶ್ರೀನಿವಾಸ ಪ್ರಸಾದ್ ಅವರು ಬಾಲ್ಯದಿಂದಲೇ ಬರೆವಣಿಗೆಯಲ್ಲಿ ತೊಡಗಿಕೊಂಡವರು.ತಮ್ಮ 10ನೇ ವಯಸ್ಸಿನಲ್ಲೇ ಬೆಂಗಳೂರು ಆಕಾಶವಾಣಿಯಲ್ಲಿ ಬಾಲಕಲಾವಿದನಾಗಿ `ಒಗ್ಗಟ್ಟಿನಲ್ಲಿ ಬಲವಿದೆ', `ಸಮುದ್ರದಲ್ಲಿ ಆಹಾರ...' ಸೇರಿದಂತೆ 10 ನಾಟಕಗಳಲ್ಲಿ ಅಭಿನಯಿಸಿದ್ದರು.  ಆಚಾರ್ಯ ಪಾಠಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಇವರು 3 ವರ್ಷದಲ್ಲಿ ಸುಮಾರು 155 ಅಂತರಕಾಲೇಜು ಬಹುಮಾನಗಳನ್ನು ಪಡೆದು ಪ್ರತಿಭಾವಂತ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾದರು. ಶೇಷಾದ್ರಿಪುರಂ ಕನ್ನಡ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ಎಂ.ಎ./ಪದವಿಯನ್ನು ವ್ಯಾಸಂಗ ಮಾಡಿದರು. ಪ್ರಸ್ತುತ ಅವರು ಕನ್ನಡ ಉಪನ್ಯಾಸಕರು.  ಕೃತಿಗಳು: ಸಾಹಿತ್ಯ ಶಿಲ್ಪಿ : ಚಿ ಉದಯಶಂಕರ್ , ಸ್ವರ ರಾಗ ಸುಧಾ : ಸಿನಿಮಾ ಸಂಗೀತದ ಕ್ಲಾಸಿಕಲ್ ಟಚ್.  ...

READ MORE

Related Books