ಬಾನಯಾನ

Author : ವಿಶ್ವೇಶ್ವರ ಭಟ್

Pages 608

₹ 475.00
Year of Publication: 2013
Published by: ಸಾಹಿತ್ಯ ಪ್ರಕಾಶನ
Address: ಕೊಪ್ಪಿಕರ್‌ ರೋಡ್‌,ಹುಬ್ಬಳ್ಳಿ-580020
Phone: 9448110034

Synopsys

ಕ್ಯಾಪ್ಟನ್‌ ಗೋಫಿನಾಥ್‌ ಅವರು ಆಂಗ್ಲ ಭಾಷೆಯಲ್ಲಿ ರಚಿಸಿದ `Simply Fly’ ಶೀರ್ಷಿಕೆಯ ಆತ್ಮಕಥನವನ್ನು ಪತ್ರಕರ್ತ ವಿಶ್ವೇಶ್ವರ ಭಟ್‌ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ ʻಬಾನಾಯಾನʼ. ಪ್ರತಿಯೊಬ್ಬ ಭಾರತೀಯನೂ ವಿಮಾನಯಾನ ಮಾಡಬೇಕು ಎಂಬ ಆಶಯದೊಂದಿಗೆ ಕಡಿಮೆ-ವೆಚ್ಚದ ಏರ್ ಲೈನ್ ʻಏರ್‌ ಡೆಕ್ಕನ್‌ ಸಂಸ್ಥೆಯನ್ನು ಸ್ಥಾಪಿಸಿ ಚರಿತ್ರೆ ಸೃಷ್ಟಿಸಿದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಗೋಪಿನಾಥ್‌. ಅಪ್ರತಿಮ ಕನ್ನಡಿಗನೊಬ್ಬನ ರೋಚಕ ಜೀವನಗಾಥೆ ಇದು ಎಂದು ಅನುವಾದಕರು ಅಭಿಪ್ರಾಯಪಟ್ಟಿದ್ದಾರೆ. 

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books