ಬನ್ನಿ ನಮ್ಮ ಹಾಡಿಗೆ

Author : ಎಚ್. ಡುಂಡಿರಾಜ್

Pages 90

₹ 70.00
Published by: ಅಂಕಿತ ಪುಸ್ತಕ

Synopsys

ಹೆಚ್‍. ಡುಂಡಿರಾಜ್‍ರವರು ಬರೆದ 63 ಬರೆವಣಿಗೆಗಳ ಸಂಕಲನ ಬನ್ನಿ ನಮ್ಮ ಹಾಡಿಗೆ. ಎಲ್ಲಾ ಲೇಖನಗಳಲ್ಲಿ ತಮ್ಮ ಸಾಂಪ್ರದಾಯಿಕ ಶೈಲಿಯಾದ ಚುಟುಕುಗಳು ಮತ್ತು ಶ್ಲೇಷೆಯನ್ನು ಕಾಣಬಹುದು. ಎಲ್ಲಾ ವಯಸ್ಸಿನ ಓದುಗರಿಗೆ ಮನಸ್ಸಿಗೆ ಮುದ ನೀಡುವ ಹಾಗೂ ಓದಿನೆಡೆಗೆ ಸದಭಿಪ್ರಾಯ ಬೆಳೆಸುವ ಪುಸ್ತಕ ಇದು.

About the Author

ಎಚ್. ಡುಂಡಿರಾಜ್
(18 August 1956)

ಎಚ್. ಡುಂಡಿರಾಜ್, ಕನ್ನಡದ ಹೆಸರಾಂತ ಚುಟುಕು ಕಾವ್ಯ ಸಾಹಿತಿ. ಈವರೆಗೆ ಸುಮಾರು 45 ಪುಸ್ತಕಗಳನ್ನು ಬರೆದಿರುವ ಇವರು, ತಮ್ಮ ಪುಸ್ತಕಗಳಲ್ಲಿ ಚುಟುಕು ಸಾಹಿತ್ಯದ ಕುರಿತಾಗಿನ ಎಳೆಗಳನ್ನು ಸೂಕ್ಷ್ಮವಾಗಿ ಬಿಡಿಸಿಟ್ಟಿದ್ದಾರೆ. ಸಾಹಿತ್ಯ ಮತ್ತು ಹಾಸ್ಯದ ಸಮ್ಮಿಲನ ಇವರ ಕೃತಿಗಳ ವಿಶೇಷತೆ.  ಉಡುಪಿ ಜೆಲ್ಲೆಯ ಹಟ್ಟಿಕುದ್ರುವಿನಲ್ಲಿ 18 ಆಗಸ್ಟ್ 1956ರಲ್ಲಿ ಜನಿಸಿದ ಇವರು, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಸದ್ಯಕ್ಕೆ ಮಂಗಳೂರಿನ ಕಾರ್ಪೋರೇಶನ್‍ ಬ್ಯಾಂಕ್‍ನ ಸಹಾಯಕ ಮಹಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದಾರೆ.  2011ರಲ್ಲಿ ನಡೆದ ಸಂಯುಕ್ತ ಅರಬ್‍ ಸಂಸ್ಥಾನದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು, ತಮ್ಮ ಕೃತಿಗಳಲ್ಲಿ ...

READ MORE

Related Books