ಬಯಲು ಸೀಮೆಯ ಲಾವಣಿಗಳು

Author : ಕಾಳೇಗೌಡ ನಾಗವಾರ

Pages 176

₹ 6.00




Year of Publication: 1973
Published by: ಕನ್ನಡ ಅಧ್ಯಯನ ಸಂಸ್ಥೆ
Address: ಮೈಸೂರು ವಿಶ್ವವಿದ್ಯಾಲಯ

Synopsys

‘ಬಯಲು ಸೀಮೆಯ ಲಾವಣಿಗಳು’ ಕೃತಿಯು ಕಾಳೇಗೌಡ ನಾಗವರ ಅವರ ಅಧ್ಯಯನ ಗ್ರಂಥವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಹಾ.ಮಾ ನಾಯಕ ಅವರು, ಜಾನಪದ ಸಾಹಿತ್ಯದ ಬಗೆ, ಭಾಷೆ, ವೈಜ್ಞಾನಿಕತೆ ಹಾಗೂ ಕ್ರಿಯಾತ್ಮಕ ಬಗೆಗಳಿಗೆ ಸಂಬಂಧಿಸಿದಂತೆ ಕತೆ, ಗೀತೆ, ಲಾವಣಿ, ಒಗಟು, ಗಾದೆ, ನಂಬಿಕೆ, ಸಂಪ್ರದಾಯ, ವೈದ್ಯ, ಅಡುಗೆ, ಉಡುಗೆ, ವೃತ್ತಿ, ಮಾಟ, ಮಂತ್ರ, ನೃತ್ಯ, ನಾಟಕ, ಚಿತ್ರ, ಶಿಲ್ಪ, ಆಟ, ಕೂಟ, ನಡೆ, ನುಡಿ ಮುಂತಾದ ಜನಪದ ಜೀವನದ ಎಲ್ಲ ಸ್ತರಗಳನ್ನು ಒಳಗೊಳ್ಳುವ ವಿಸ್ತಾರ, ವೈವಿಧ್ಯದ ಹಿನ್ನೆಲೆಯಲ್ಲಿ ಪರಿಶೋಧನೆ ಸಂರಕ್ಷಣೆಗಳು ಅತ್ಯಂತ ಅವಶ್ಯಕವಾದ ವಿಚಾರವಾಗಿದೆ. ಅಂತಹ ಅವಶ್ಯಕ ವಿಷಯಗಳನ್ನು ಈ ಕೃತಿಯು ಕಟ್ಟಿಕೊಟ್ಟುತ್ತದೆ. ಹಾಗೆಯೇ ಬಯಲು ಸೀಮೆಯಲ್ಲಿ ಪ್ರಚಲಿತವಾಗಿರುವ ಕೆಲವು ಉತ್ತಮ ಲಾವಣಿಗಳನ್ನು ಇಲ್ಲಿ ಹಾಕಿ ಕೊಟ್ಟಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ. 

About the Author

ಕಾಳೇಗೌಡ ನಾಗವಾರ
(02 February 1947)

ಕತೆಗಾರ ಕಾಳೇಗೌಡ ನಾಗವಾರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ನಾಗವಾರದವರು. ತಂದೆ ಸಿದ್ದೇಗೌಡ, ತಾಯಿ ಲಿಂಗಮ್ಮ. ನಾಗವಾರ, ಚೆನ್ನಪಟ್ಟಣ, ಮಂಡ್ಯ, ಮೈಸೂರಿನಲ್ಲಿ ಶಿಕ್ಷಣ ಪಡೆದು, ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದ ಎಂ.ಎ.(1971)  ಪದವೀಧರರು. ಬೆಂಗಳೂರು ವಿ.ವಿ.ಯಿಂದ ‘ಕಾಡುಗೊಲ್ಲರ ಒಂದು ಹಟ್ಟಿಯ ಅಧ್ಯಯನ’ ಪ್ರಬಂಧಕ್ಕೆ ಪಿಎಚ್ ಡಿ ಪದವಿ (1985) ಪಡದರು.  ಕೊಡಗು ಜಿಲ್ಲೆಯ ಗೋಣಿಕೊಪ್ಪಲು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದ ಕಾಲೇಜುಗಳಲ್ಲಿ ಉಪನ್ಯಾಸಕರಾಗಿದ್ದರು. ಬೆಂಗಳೂರು ವಿ.ವಿ. ಜ್ಞಾನಭಾರತಿ ಕನ್ನಡ (1985) ಅಧ್ಯಯನ ಕೇಂದ್ರ ಹಾಗೂ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ (2007ರವರೆಗೆ) ಪ್ರಾಧ್ಯಾಪಕರಾಗಿದ್ದರು.  ಕಾಳೇಗೌಡ ನಾಗವಾರ ಅವರ ...

READ MORE

Related Books