ಬೇಟೆ

Author : ವಿವೇಕಾನಂದ ಕಾಮತ್

Pages 208

₹ 125.00




Year of Publication: 2009
Published by: ಜಾಗ್ರತಿ ಪ್ರಿಂಟರ್ಸ್
Address: ನಂ. 56 / 1-6 , ನರಸಿಂಹಯ್ಯ ಗಾರ್ಡನ್ , ಕೊಟ್ಟಿಗೆ ಪಾಳ್ಯ, ಮಾಗಡಿ ಮುಖ್ಯರಸ್ತೆ, ಬೆಂಗಳೂರು - 560091

Synopsys

ಕೊಲೆ ಆರೋಪ ಹೊತ್ತು ಜೈಲಿಗೆ ಹೋಗಿದ್ದ ಪ್ರಥಮ್ ನಂದಿನಿಯ ಸಹಾಯದಿಂದ ಹೊರಗೆ ಬಂದಿದ್ದ. ಮೊದಲು ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋದವನು ಈಗ ತನಗೆ ಸಹಾಯ ಮಾಡಿದ ನಂದಿನಿಯನ್ನೇ ಕೊಲೆ ಮಾಡಿ ಓಡಿ ಹೋದನೇ..? ಜನರ ಕಣ್ಣಿಗೆ ಅಪರಾಧಿಯಾಗಿರುವ ಪ್ರಥಮ್ ನ ಹಿಂದೆ ಬಿದ್ದವರು ಯಾರು..? ಯಾರು ಯಾರ ಬೇಟೆ..? ಮಂಗಳ ವಾರಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books