‘ಬೆಕ್ಕಿನ ಕಣ್ಣು’ ಕನ್ನಡದ ಖ್ಯಾತ ಕಾದಂಬರಿಗಾರ್ತಿ ತ್ರಿವೇಣಿ ಅವರ ಕೃತಿ. ತ್ರಿವೇಣಿ ತಮ್ಮ ಕಾದಂಬರಿಗಳಲ್ಲಿ ಮನಶಾಸ್ತ್ರೀಯ ವಿಚಾರಗಳನ್ನು ಅತ್ಯದ್ಭುತವಾಗಿ ಬರೆಯುತ್ತಾರೆ. ಮನಶಾಸ್ತ್ರ ಅಧ್ಯಯನದ ವಿಶಿಷ್ಟ ಕ್ಷೇತ್ರವಾಗುವ ಮೊದಲೇ ತ್ರಿವೇಣಿ ಅವರು ತಮ್ಮ ಕಾದಂಬರಿಯ ಪಾತ್ರಗಳ ಸ್ವಭಾವ ನಡೆ ನುಡಿಯನ್ನು ಅತ್ಯಂತ ಸೂಕ್ಷ್ಮವಾಗಿ ವಿವರಿಸುತ್ತಿದ್ದರು. ಅವರ ಬೆಕ್ಕಿನ ಕಣ್ಣು ಸಹ ಅಂತಹ ಮನೋವೈಜ್ಞಾನಿಕ ಕಾದಂಬರಿ. ಮುಖ್ಯವಾಗಿ ಗಂಡು-ಹೆಣ್ಣಿನ ಸಹಜೀವನದ ಶ್ರೀಮಂತಿಕೆಯನ್ನು ಚಿತ್ರಿಸಿದ್ದಾರೆ. ಪುರುಷನ ಪ್ರೇಮ, ತಾಯ್ತನದ ಹಿಗ್ಗು, ಇವನ್ನು ಹೆಣ್ಣು ಎಷ್ಟರ ಮಟ್ಟಿಗೆ ಬಯಸುತ್ತಾಳೆ ಎಂಬುದನ್ನು ಹೆಣ್ಣಿನ ದೃಷ್ಟಿಕೋನದಿಂದಲೇ ನಿರೂಪಿಸಿದ್ದಾರೆ.
ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು 20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...
READ MORE