ಬೆಸ್ಟ್ ಆಫ್ ಬಿ.ಆರ್.ಎಲ್

Author : ಬಿ.ಆರ್. ಲಕ್ಷ್ಮಣರಾವ್

Pages 222

₹ 180.00




Year of Publication: 2021
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಕವಿ ಬಿ.ಆರ್.ಲಕ್ಷ್ಮಣರಾವ್ ಅವರು ಬರೆದ ಕವನ ಸಂಕಲನದಲ್ಲಿಯ ಆಯ್ದ ಹನಿಗವನಗಳು, ಇಡಿಗವನಗಳು ಹಾಗೂ ಭಾವಗೀತೆಗಳನ್ನು ಸಂಗ್ರಹಿಸಿ ಸಂಕಲನ-ಬೆಸ್ಟ್ ಆಫ್ ಬಿ.ಆರ್.ಎಲ್. ಅವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಕವನಗಳನ್ನು ಸಂಕಲಿಸಿದೆ. ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಕವಿತೆಗಳನ್ನು ಬರೆಯುತ್ತಿರುವ ಬಿ.ಆರ್. ಲಕ್ಷ್ಮಣರಾವ್, ತಮ್ಮ ನವಿರಾದ, ಪ್ರಣಯಭರಿತ ಭಾವಗಳ ಮೂಲಕ ಕವನಗಳು ಸಮಯಾತೀತವಾಗಿರುವಂತೆ ರಚಿಸಿದ್ದು ಇವರ ವೈಶಿಷ್ಟ್ಯ.

About the Author

ಬಿ.ಆರ್. ಲಕ್ಷ್ಮಣರಾವ್
(09 September 1946)

ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್‌. ಲಕ್ಷ್ಮಣರಾವ್‌ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.  ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...

READ MORE

Related Books