ಇದು ಮನುಷ್ಯ ತನ್ನ ಅನ್ನಕ್ಕಾಗಿ ನಿಸರ್ಗದೊಂದಿಗೆ ನಡೆಸಿದ ಹೋರಾಟದ ಕತೆಯನ್ನು ಬಿತ್ತರಿಸುವ ಕಾದಂಬರಿ. ಕಾರಂತರ ಇತರ ಕಾದಂಬರಿಗಳಂತೆ ಆಳವಾದ ಚಿಂತನೆಗಳ ಕತೆ ಇಲ್ಲದಿರುವ ಕೃತಿ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ಓದುಗನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.
ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...
READ MOREಬೆಟ್ಟದ ಜೀವ Bettadha Jeeva Kannada Award Winning Movie P Shesadri