ಬೆಟ್ಟದ ಮನೆಯಲ್ಲಿ ಮತ್ತು ಇತರ ಪ್ರಬಂಧಗಳು

Author : ಗೊರೂರು ರಾಮಸ್ವಾಮಿ ಅಯ್ಯಂಗಾರ್

Pages 90

₹ 85.00




Year of Publication: 2022
Published by: ಐಬಿಎಚ್ ಪ್ರಕಾಶನ
Address: #18/1, 2ನೇ ಮುಖ್ಯ ರಸ್ತೆ, ಎನ್. ಆರ್ ಕಾಲೋನಿ, ಬೆಂಗಳೂರು- 560004
Phone: 9845070613

Synopsys

`ಬೆಟ್ಟದ ಮನೆಯಲ್ಲಿ ಮತ್ತು ಇತರ ಪ್ರಬಂದಗಳು’ ಕೃತಿಯು ಗೋರೂರರು ರಾಮಸ್ವಾಮಿ ಅವರ ಕತಾಸಂಕಲನ ಕೃತಿಯಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ: ಈ ಕೃತಿಯು ಮೊದಲನೇ ಮುದ್ರಣವನ್ನು 1972 ಹಾಗೂ ಪ್ರಸ್ತುತ ಕೃತಿಯು ಎರಡನೇ ಮುದ್ರಣವನ್ನು ಕಂಡಿದೆ. ಗೊರೂರರು ತಮ್ಮ ಬರಹಗಳಲ್ಲಿ ಈಗ ಕಾಣಸಿಗದ ಅಥವಾ ತ್ವರಿತವಾಗಿ ಮರೆಯಾಗುತ್ತಿರುವ ಹಳ್ಳಿಯ ಬದುಕನ್ನು ಅದರ ಎಲ್ಲ ಮುಖಗಳೊಡನೆ ಚಿತ್ರಿಸುವಲ್ಲಿ ಸಫಲರಾಗಿದ್ದಾರೆ. ಗ್ರಾಮೀಣ ಜೀವನದಲ್ಲಿ ಅವರು ಒಂದಾಗಿ ಬಾಳಿದ್ದರಿಂದ ಇದು ಸಾಧ್ಯವಾಗಿದೆ. ಅವರ ಕೃತಿಗಳಲ್ಲಿ ಕಂಡುಬರುವ ಪಾತ್ರ ವೈವಿಧ್ಯ ಅಪಾರವಾದುದು; ಅಲ್ಲಿ ಗ್ರಾಮದ ಎಲ್ಲ ವೃತ್ತಿಗಳ, ಎಲ್ಲ ಜಾತಿಗಳ ಜನರೂ ಇದ್ದಾರೆ – ಹಾರುವರಿಂದ ಹರಿಜನರತನಕ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ.

About the Author

ಗೊರೂರು ರಾಮಸ್ವಾಮಿ ಅಯ್ಯಂಗಾರ್
(04 July 1904 - 28 September 1991)

ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...

READ MORE

Related Books