ಭಾರತೀಯ ತತ್ವಜ್ಞಾನ

Author : ಗೌರೀಶ ಕಾಯ್ಕಿಣಿ

Pages 212

₹ 113.00




Year of Publication: 2012
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಭಾರತೀಯ ತತ್ವಜ್ಞಾನ: ವೈಚಾರಿಕ ಮತ್ತು ಸಾಮಾಜಿಕ ಸಂಘರ್ಷ-ಈ ಕೃತಿಯನ್ನು ಮೂಲದಲ್ಲಿ ಎಸ್.ಜಿ. ಸರ್ದೇಸಾಯಿ ಆಂಗ್ಲ ಭಾಷೆಯಲ್ಲಿ ಬರೆದಿದ್ದು, ಸಾಹಿತಿ ಗೌರೀಶ ಕಾಯ್ಕಿಣಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಭಾರತೀಯ ತತ್ವಜ್ಞಾನವು ಮೂಲತಃ ವೈಚಾರಿಕವಾಗಿದ್ದು, ಸಾಮಾಜಿಕ ಸಂಘರ್ಷವನ್ನೇ ಎದುರಿಸುತ್ತಾ ಬಂದಿದೆ. ಏಕೆಂದರೆ, ಭಾರತೀಯ ತತ್ವಜ್ಞಾನವನ್ನು ಪುರೋಹಿತಶಾಹಿ ವಿರೋಧಿಸುತ್ತಲೇ ಬಂದಿದ್ದು, ಧರ್ಮ-ಜಾತಿ ನೆಪದಲ್ಲಿ ತನ್ನ ಪ್ರಭುತ್ವವನ್ನು ಸ್ಥಾಪಿಸಲು ಇಂದಿಗೂ ಹವಣಿಸುತ್ತಿದೆ. ಈ ಎಲ್ಲ ಸಂಗತಿಗಳ ಹಿನ್ನೆಲೆಯಲ್ಲಿ ಲೇಖಕರು ವಿಶ್ಲೇಷಿಸಿದ್ದನ್ನು ಇಲ್ಲಿ ಕಾಣಬಹುದು.

About the Author

ಗೌರೀಶ ಕಾಯ್ಕಿಣಿ
(12 September 1912 - 14 November 2002)

ಸಾಹಿತಿ ಗೌರೀಶ್‌ ಕಾಯ್ಕಿಣಿ ಅವರು 1912 ಸೆಪ್ಟೆಂಬರ್‌ 12ರಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದರು. ತಂದೆ ವಿಠಲರಾವ್ ತಹಸೀಲ್ದಾರರು, ತಾಯಿ ಸೀರಾಬಾಯಿ. ಗೌರೀಶ ಹುಟ್ಟಿದ ಮೂರು ತಿಂಗಳಲ್ಲಿ ತಂದೆ ತೀರಿಕೊಂಡರು.  ಗೋಕರ್ಣ, ಕುಮುಟಾ ಹಾಗೂ ಧಾರವಾಡದಲ್ಲಿ ಶಿಕ್ಷಣ ಪಡೆದು, ಮುಂದಿನ ಶಿಕ಼್ಣ ಕುಮಟಾ ಹಾಗೂ ಧಾರವಾಡದಲ್ಲಿ ಮುಂದುವರಿಯಿತು.  ಎಸ್.ಟಿ.ಸಿ. ಪರೀಕ್ಷೆಯಲ್ಲಿ, ಆ ಕಾಲದ ಮುಂಬಯಿ ಪ್ರಾಂತ್ಯಕ್ಕೆ ಪ್ರಥಮರಾಗಿ ತೇರ್ಗಡೆಯಾದರು. ಅವರು ಹಿಂದಿಯಲ್ಲಿ ವಿಶಾರದರೂ ಆಗಿದ್ದರು.  ಮಾಧ್ಯಮಿಕ ಶಾಲಾ ಅಧ್ಯಾಪಕರಾಗಿ ನಾಲ್ಕು ದಶಕಗಳ ಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಗೌರೀಶರು 1930ರಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡರು. ’ಶಾಂಡಿಲ್ಯ ಪ್ರೇಮಸುಧಾ’ ಕನ್ನಡ ಹಾಗೂ ಮರಾಠಿ ...

READ MORE

Related Books