ಭಾಮಾ ದಲಿತ ಪ್ರಜ್ಞೆ

Author : ಎಚ್.ಎಸ್. ನಾಗಭೂಷಣ

Pages 200

₹ 180.00




Year of Publication: 2017
Published by: ಸೃಷ್ಟಿ ಪಬ್ಲಿಕೇಷನ್ಸ್
Address: ನಂ. 121, 13 ನೇ ಮುಖ್ಯರಸ್ತೆ, ಎಂ. ಸಿ. ಲೇಜೌಟ್, ವಿಜಯನಗರ, ಬೆಂಗಳೂರು 560040
Phone: 9845096668

Synopsys

ದಲಿತ ಸಾಹಿತ್ಯ ಮತ್ತು ಅದರ ಉತ್ತರೋತ್ತರ ಚರ್ಚೆಗಳು ಸಮಕಾಲೀನ ಸಾಹಿತ್ಯ ಮತ್ತು ಸಂಸ್ಕೃತಿ ಸಂದರ್ಭಗಳಲ್ಲಿ ನಡೆಯುತ್ತಿರುವಂತದ್ದು. ಈ ದೃಷ್ಟಿಯಿಂದ ದಲಿತ ಸ್ತ್ರಿ ಬರಹಗಾರರಾದ ಭಾಮಾ ಅವರ ಸಾಹಿತ್ಯ ಕೃಷಿ ಈ ಭಾಮಾ ದಲಿತ ಪ್ರಜ್ಞೆ ಕೃತಿಯಲ್ಲಿ ಸ್ಪಷ್ಟವಾಗುತ್ತದೆ.

ಇದರ ಮೂಲ ಬರಹಗಾರರಾದ ಆರ್ . ಕೆ ಧವನ್ ಮತ್ತು ಸುನಿತಾ ಪುರಿಯವರ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿದವರು ವಿಮರ್ಶಕ ಡಾ. ಎಚ್.ಎಸ್. ನಾಗಭೂಷಣ. ಭಾಮಾ ಅವರು ದಲಿತ ಶೋಷಣೆಗಳನ್ನು ತಮ್ಮ ಸಾಹಿತ್ಯದಲ್ಲಿ ಕೇಂದ್ರಿಕರಿಸುತ್ತಾರೆ.  ಶೋಷಣೆಯೇ ಪ್ರಧಾನವಾದ ಸಮುದಾಯಗಳಲ್ಲಿ ಶೋಷಣೆ ಎನ್ನುವುದು ಸಾಮಾನ್ಯ ಸಂಗತಿಯಾಗಿದೆ. ಈ ಶೋಷಣೆಯ ಸ್ವರೂಪವು ದಲಿತ ಎನ್ನುವ ಹಿನ್ನೆಲೆಯಲ್ಲಿ ನೋಡುವಾಗ ಭಾರತೀಯ ಸಮಾಜದಲ್ಲಿ ಇರುವ ಜಾತಿ ಪದ್ದತಿ, ಹೊರದೂಡುವಿಕೆಯ ಮನಃಸ್ಥಿತಿ ಇತ್ಯಾದಿಗಳಲ್ಲಿ ಕಾಣಬಹುದು. ಭಾಮಾ ಅವರ ಸಾಹಿತ್ಯದ ಹಿನ್ನಲೆಯಲ್ಲಿ ದಲಿತ ಸಂಕಥನಗಳ ವೈವಿಧ್ಯಮಯವಾದ ಅಂಶಗಳನ್ನು ಚರ್ಚಿಸಲಾಗಿದೆ.

About the Author

ಎಚ್.ಎಸ್. ನಾಗಭೂಷಣ

ಡಾ. ಎಚ್.ಎಸ್. ನಾಗಭೂಷಣ ಅವರು ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದಾರೆ. ’ಎಲ್ಲೆ ಮೀರಿ’ ಪುಸ್ತಕ ಅಲ್ಲದೆ ಅವರು ಸಮಕಾಲೀನ ತಮಿಳು ಲೇಖಕ ಬಾಮಾ ಕುರಿತು ಪುಸ್ತಕ ಪ್ರಕಟಿಸಿದ್ದಾರೆ. ಪದವಿ ವಿದ್ಯಾರ್ಥಿಗಳಿಗಾಗಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ರಂಗ ಚಟುವಟಿಕೆಗಳಲ್ಲಿಯೂ ಆಸಕ್ತರಾಗಿರುವ ನಾಗಭೂಷಣ ಅವರು ಹಲವು ಕನ್ನಡ ಮತ್ತು ಇಂಗ್ಲಿಷ್ ನಾಟಕಗಳಲ್ಲಿ ನಟಿಸಿದ್ದಾರೆ ಮತ್ತು ನಿರ್ದೇಶನ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ರಂಗಭೂಮಿಯ ಆಸಕ್ತಿ ಮೂಡಿಸುವುದಕ್ಕಾಗಿ ಹಲವು ನಾಟಕ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ಶಿವಮೊಗ್ಗದ ಕರ್ನಾಟಕ ಸಂಘದ ಗೌರವ ...

READ MORE

Related Books