ಭಾರತದ ಮೊದಲ ಕಾದಂಬರಿಗಳು

Author : ಜೆ.ಬಾಲಕೃಷ್ಣ

Pages 303

₹ 175.00




Published by: ಸಾಹಿತ್ಯ ಅಕಾಡೆಮಿ ನವದೆಹಲಿ

Synopsys

ಭಾರತದಲ್ಲಿ ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ರಾಷ್ಟ್ರದ ಪರಿಕಲ್ಪನೆಯೊಂದಿಗೆ ಕಾದಂಬರಿ ಪ್ರಕಾರ ಉಗಮವಾಯಿತು ಎನ್ನುತ್ತಾರೆ ಕೆಲ ಸಾಹಿತ್ಯ ಚರಿತ್ರೆಕಾರರು. ಬಹುಭಾಷಾ ಪರಂಪರೆ ಆಯಾ ಚಾರಿತ್ರಿಕ-ಸಾಮಾಜಿಕ ಘಟ್ಟಗಳಲ್ಲಿ ಸಾಹಿತ್ಯದ ಪ್ರಕಾರದ ಮೇಲೆ ಬೀರಿರುವ ಪರಿಣಾಮಗಳನ್ನು ಈ ಕೃತಿ ಪರಿಶೋಧಿಸುವ ಪ್ರಯತ್ನಮಾಡಿದೆ. ಇದು ಅನುವಾದಿತ ಕೃತಿಯಾಗಿದ್ದು ಇಲ್ಲಿ ಸಾಹಿತ್ಯ ವಿಮರ್ಶಕರು, ಚರಿತ್ರಕಾರರು ಮತ್ತು ರಾಜಕೀಯ ತಾತ್ವಿಕ ಸಿದ್ದಾಂತಕಾರರು ರಚಿಸಿದ ಹದಿನಾಲ್ಕು ಪ್ರಬಂಧಗಳು ಇವೆ. ಅವು ವಿವಿಧ ಭಾರತೀಯ ಭಾಷೆಗಳಲ್ಲಿನ ಮೊದಲ ಕಾದಂಬರಿಗಳನ್ನು ಮತ್ತು ಅವು ರಚನೆಗೊಂಡ ಸಂದರ್ಭಗಳನ್ನು ವಿಶ್ಲೇಷಿಸುತ್ತದೆ.

About the Author

ಜೆ.ಬಾಲಕೃಷ್ಣ

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ. ...

READ MORE

Related Books