ಭಿತ್ತಿ

Author : ಎಸ್.ಎಲ್. ಭೈರಪ್ಪ

Pages 593

₹ 545.00

Buy Now


Year of Publication: 1996
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsis

’ಭಿತ್ತಿ’ ಕೃತಿಯು ಕನ್ನಡದ ಶ್ರೇಷ್ಠ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರ ಆತ್ಮಕತೆ.

ಬೆನ್ನು ಹತ್ತಿದ ಬಡತನ, ಜವಾಬ್ದಾರಿಯರಿಯದ ಅಪ್ಪ,ನೆರವು ನೀಡದ ಬಂಧುಗಳು ಹಾಗೂ ಇತರರ ಕೊಂಕು ನುಡಿಗಳ ನಡುವೆ ಭೈರಪ್ಪನವರ ಬಾಲ್ಯದ ಬದುಕು ತೆರೆದುಕೊಳ್ಳುತ್ತದೆ. ಏಳು ಮಕ್ಕಳ ದೊಡ್ಡ ಕುಟುಂಬಕ್ಕೆ ತಾಯಿಯ ದುಡಿಮೆಯೊಂದೇ ಆಧಾರ. ಗಂಡಸಿಗೆ ಸರಿಸಮವಾಗಿ ದುಡಿಯುತ್ತ ಕುಟುಂಬವನ್ನು ಸಾಕುತ್ತಿರುವ ತಾಯಿಯನ್ನು ಕಂಡರೆ ಭೈರಪ್ಪನವರಿಗೆ ಎಲ್ಲಿಲ್ಲದ ಗೌರವ ಮತ್ತು ಅಭಿಮಾನ. ಅಭಿಮಾನ ಮತ್ತು ಗೌರವ ಅಮ್ಮನ ಸಾವಿನ ನಂತರವೂ ಅವರಲ್ಲುಳಿದು ಅವರನ್ನು ಸದಾ ಎಚ್ಚರಿಸುವ ಜಾಗೃತ ಪ್ರಜ್ಞೆಯಾಗುತ್ತದೆ. ಜೊತೆಗೆ ಬಾಲ್ಯದಲ್ಲೇ ಕಂಡ ಸಾಲು ಸಾಲು ಸಾವುಗಳು ಭೈರಪ್ಪನವರ ಮನಸ್ಸಿನ ಮೇಲೆ ಗಾಢ ಪರಿಣಾಮವನ್ನುಂಟು ಮಾಡುತ್ತವೆ

ಕಲಾವಿದನ ಜೀವನಭಿತ್ತಿ ಮತ್ತು ಅವನ ಸೃಷ್ಟಿಗಳ ಪರಸ್ಪರ ಸಂಬಂಧವು ರಹಸ್ಯಪೂರ್ಣವಾದುದು.ಚಿತ್ರವು ಮೂಡಿದ ನಂತರ ಭಿತ್ತಿಯು ಇಲ್ಲದೆ ಆಗಿಬಿಡುತ್ತದೆ. ಕಲಾಕೃತಿಯನ್ನು ಅರಿಯಲು ವಾಸ್ತವವಾಗಿ ಜೀವನಚರಿತ್ರೆಯ ಅಗತ್ಯವಿಲ್ಲ.

ಆದರೆ ಕೃತಿಗಳನ್ನು ಓದಿ ಲೇಖಕನ ಜೀವನದ ಘಟನೆಗಳನ್ನು ಅನ್ಯರು ತಮ್ಮ ತಮ್ಮ ಇಚ್ಛೆಯಂತೆ ಕಲ್ಪಿಸಿಕೊಳ್ಳುವುದನ್ನು ತಪ್ಪಿಸಲೆಂದು ಕೆಲವು ಸ್ನೇಹಿತರು ಒತ್ತಾಯಿಸಿದ್ದರ ಫಲವಾಗಿ ಆತ್ಮವೃತ್ತಾಂತ ಮೂಡಿಬಂದಿದೆ. ಬರಹದ ನಂತರ ಭೈರಪ್ಪನವರು ಹೊಸತೊಂದು ಕಾದಂಬರಿಯನ್ನು ಬರೆದಿರುವುದು, ಆತ್ಮಚರಿತ್ರೆಯನ್ನು ಬರೆದರೆ ಅನುಭವದ ಬೀಜಗಳು ಹೊರಬಿದ್ದು ಸೃಜನಶೀಲತೆಯು ನಿಂತುಹೋಗಬಹುದೆಂಬ ಶಂಕೆಗೆ ಆಧಾರವಿಲ್ಲವೆಂಬುದನ್ನು ತೋರಿಸುತ್ತದೆ. ಸಾಹಿತಿಯ ಜೀವನದಲ್ಲಿ ಗುರುತಿಸಬಹುದಾದ ಅಂಶಗಳ ಹಂಗಿಲ್ಲದೆಯೂ ಸಾಹಿತ್ಯವು ಸೃಷ್ಟಿಯಾಗುತ್ತದೆ. ಅಂಥದನ್ನು ಸೃಷ್ಟಿಸುವುದೇ ಪ್ರತಿಭೆಯ ಗುರುತು.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books