ಬೋಳುವಾರು ಮಹಮದ್ ಕುಂಞ: ಜೀವನ ಮತ್ತು ಸಾಧನೆ

Author : ಪ್ರಧಾನ್ ಗುರುದತ್ತ

Pages 108

₹ 80.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

‘ಬೋಳುವಾರು ಮಹಮದ್ ಕುಂಞ : ಜೀವನ ಮತ್ತು ಸಾಧನೆ’ ಲೇಖಕ ಪ್ರಧಾನ ಗುರುದತ್ತ ಅವರು ರಚಿಸಿರುವ ಕೃತಿ. ಕನ್ನಡದ ಲೇಖಕ ಬೋಳುವಾರು ಮಹಮದ್ ಕುಂಞ ಅವರ ಸಾಹಿತ್ಯಕ ಬದುಕಿನ ಮೇಲೆ ಬೆಳಕು ಚೆಲ್ಲುವ ಕೃತಿ ಇದು. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜನಿಸಿದ ಬೋಳುವಾರು ಮಹಮದ್ ಕುಂಞ ಅವರು ಸಣ್ಣಕತೆ, ಕಾದಂಬರಿ, ನಾಟಕ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿಮಾಡಿದ್ದಾರೆ. ಅವರ ಬದುಕು-ಬರಹ ಮತ್ತು ಸಾಧನೆಗಳ ಕುರಿತಾದ ಮಾಹಿತಿಗಳು ಈ ಕೃತಿಯಲ್ಲಿವೆ.

About the Author

ಪ್ರಧಾನ್ ಗುರುದತ್ತ
(30 May 1938)

ಲೇಖಕ, ಅನುವಾದಕ ಪ್ರಧಾನ್ ಗುರುದತ್‌ ಅವರು ಹುಟ್ಟಿದ್ದು 30-05-1938ರಂದು ಚಿಕ್ಕಬಳ್ಳಾಪುರದಲ್ಲಿ.  ಮೈಸೂರಿನಲ್ಲಿ ಉನ್ನತ ಶಿಕ್ಷಣ ಪಡೆದ ಅವರು ಕನ್ನಡದಲ್ಲಿ ಎಂ.ಎ.ಆನರ್ಸ್, ಅನುವಾದದಲ್ಲಿ ಎಂ.ಎ., ಜೊತೆಗೆ ಪ್ರೊ.ವೆಂಕಟರಾಮಪ್ಪನವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ. ಪಿಎಚ್.ಡಿ ವಿಷಯವಾಗಿ ಕೃಷ್ಣ ಕಥೆಯ ಉಗಮ ಮತ್ತು ವಿಕಾಸ. ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ. ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ. ಕುವೆಂಪು ಕನ್ನಡ ಅಧ್ಯಯನಪೀಠದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ 1998ರಲ್ಲಿ ನಿವೃತ್ತರಾಗಿದ್ದಾರೆ. ಬಹುಮುಖ ಪ್ರತಿಭೆ, ಅಪರೂಪದ ಪ್ರಾಧ್ಯಾಪಕರು, ಬಹುಭಾಷಾಪಂಡಿತರು ಆಗಿರುವ ಪ್ರಧಾನ್ ಗುರುದತ್ತರು 150ಕ್ಕೂ ಮಿಗಿಲಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸುಮಾರು ...

READ MORE

Related Books