ಲೇಖಕಿ ಸಿ.ಎಚ್. ರಾಜಶೇಖರ ಅವರ ಕೃತಿ-ಬುದ್ಧ ಸಂಧಿಸಿದ ಅಮ್ರಪಾಲಿ ಗಂಗೆಯಂತಾದಳು. ಅಮರ ಜಾತಕ ಕಥೆಗಳನ್ನು ಜಗತ್ತಿನ ಸರ್ವಶ್ರೇಷ್ಠ ಕಥೆಗಳೆಂದು ಪರಿಗಣಿಸಲಾಗಿದೆ. ಇವುಗಳು ನಮ್ಮ ತಪ್ಪು, ಅಜ್ಞಾನ, ಸಂಕುಚಿತ ಮನೋಭಾವ ಮತ್ತು ಕುಬ್ಜತೆಯನ್ನು ಮನದಟ್ಟು ಮಾಡಿಕೊಡುವುದುರ ಜೊತೆಗೆ ಒಳ್ಳೆಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ಒಳ್ಳೆಯ ಫಲವನ್ನು ಪಡೆಯಬಹುದು ಎಂಬುದನ್ನು ದೃಢಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಜಾತಕ ಕಥೆಗಳನ್ನು ಧರ್ಮಗ್ರಂಥವೆಂದು ಅಂಗೀಕರಿಸಲಾಗಿದೆ. ಇಲ್ಲಿನ ಕಥೆಗಳ ಉದ್ದೇಶ, ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ. 25 ಬಿಡಿ ಸಂಪುಟಗಳ ಸಮಗ್ರ ಬುದ್ಧ ಸಾಹಿತ್ಯ ಮಾಲೆಯಡಿ ಈ ಕೃತಿ ಪ್ರಕಟಿಸಿದೆ. ಆಮ್ರಪಾಲಿಯ ಕಥೆ ಸೇರಿದಂತೆ ಇತರೆ ಕಥೆಗಳು ಇಲ್ಲಿ ಸಂಕಲನಗೊಂಡಿವೆ.