ಬಂಡಲ್‌ ಕತೆಗಳು

Author : ಎಸ್. ಸುರೇಂದ್ರನಾಥ್

Pages 152

₹ 140.00
Year of Publication: 2020
Published by: ಛಂದ ಪುಸ್ತಕ
Address: ಐ-004, ಮಂತ್ರಿಪ್ಯಾರಡೈಸ್‌ ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076
Phone: 9844422782

Synopsys

ಎಸ್‌. ಸುರೇಂದ್ರನಾಥ್‌ ಅವರ ಈ ಕತೆಗಳು ಮಾನವ ಅಂತಃಕರಣದ ಘಮವನ್ನು ಸೂಸುತ್ತವೆ. ಕೃತಿಗೆ ಬೆನ್ನುಡಿ ಬರೆದಿರುವ ಕತೆಗಾರ ಜಯಂತ ಕಾಯ್ಕಿಣಿ ಅವರು “ಹೂವುಗಳೇ ಸೇರಿಕೊಂಡು ಈ ಮನುಷ್ಯ ಜೀವಿಗಳ ಬಗ್ಗೆ ಮಾತಾಡಿಕೊಂಡರೆ ಹೇಗಿರುತ್ತದೆ, ಹಾಗಿದೆ ಈ ಕಿರುಗತೆ. ಪ್ರಫುಲ್ಲವಾದ ಭಂಗುರತೆಯೊಂದು ಪರಿಮಳ ತುಂಬಿಕೊಂಡು ಓಡಾಡಿದಂತೆ. ಒಂದು ನಿಶ್ಶಬ್ದ ಮನೆ, ನಿರ್ಜನ ಅಂಗಳ, ಮೂಕ ಹೂ ಮರ, ಗೇಟು, ಕಿಟಕಿ. ಗೇಟಿನಾಚೆ ಒಂದು ಲೋಕ, ಈಚೆ ಒಂದು ತಬ್ಬಲಿತನದ ದೈನಿಕ. ಎರಡರ ನಡುವೆ ತಂಗಾಳಿಯಂತೆ ಸುಳಿದಾಡುತ್ತ ಇಹದ ಪರಿಮಳದ ದಾರಿಯನ್ನು ಹೊಳೆಯಿಸುವ ಸೂಕ್ಷ್ಮ ಕಥನ. ನಮ್ಮ ನಮ್ಮ ನಿತ್ಯದಲ್ಲೇ ನಮ್ಮನ್ನು ಒರೆಗೆ ಹಚ್ಚಬಲ್ಲ ಸರಳ ಸಹಜ ನಿಗೂಢತೆಯೊಂದು ಇದೆ. ಇಲ್ಲೇ ಇದೆ. ಅದು ಕರೆದಾಗ ನಾವು ಕೇಳಿಸಿಕೊಳ್ಳಬೇಕು ಅಷ್ಟೇ! ಮತ್ತು ಅದನ್ನು ಆಲಿಸಲು ಮೊದಲು ಬೇಕಾದದ್ದು ನಮ್ಮೊಳಗಿನ ನಿಶ್ಶಬ್ದ...ಎಂಬುದು ಈ ಕಥೆಯ ಧ್ವನಿ” ಎಂದು ‘ಹೂ ಮರದ ಮನೆ’ ಕತೆ ಕುರಿತು ಹೀಗೆ ವಿಶ್ಲೇಷಿಸಿದ್ದಾರೆ.

About the Author

ಎಸ್. ಸುರೇಂದ್ರನಾಥ್

ಸುರೇಂದ್ರನಾಥ್ ಅವರು ಹುಟ್ಟಿದ್ದು ಮೂಡಬಿದರೆಯ ಸಮೀಪದ ಒಂದು ಹಳ್ಳಿಯಲ್ಲಿ. ಓದಿದ್ದು ಬೆಳೆದಿದ್ದು ದಾವಣಗೆರೆಯಲ್ಲಿ. ಓದಿನ ಸಮಯದಲ್ಲೇ ಸಾಹಿತ್ಯ, ನಾಟಕದ ಗೀಳು ಹತ್ತಿಸಿಕೊಂಡ ಅವರು ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ನಾಟಕದ ತರಬೇತಿ ಪಡೆದರು. ಹೊಟ್ಟೆಪಾಡಿಗಾಗಿ ಒಂದಿಷ್ಟು ವರ್ಷಗಳು ಹಲವಾರು ಪತ್ರಿಕೆಗಳಲ್ಲಿ, ಜಾಹೀರಾತು ಕಂಪೆನಿಗಳಲ್ಲಿ ದುಡಿದಿದ್ದಾರೆ. ಬೆಂಗಳೂರಿನ ಸಂಕೇತ್ ತಂಡದಲ್ಲಿ ಸೇರಿ ಹಲವು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಆನಂತರ ಈಟಿವಿ ಸಂಸ್ಥೆಯನ್ನು ಸೇರಿದ ಅವರು ಹದಿಮೂರು ವರ್ಷಗಳ ಕಾಲ ಹೈದರಾಬಾದಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೃತ್ತಿ, ರಂಗಭೂಮಿ ಒಡನಾಟಗಳೊಂದಿಗೆ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿರುವ ಸುರೇಂದ್ರನಾಥ್ ಎರಡು ಕಥಾಸಂಕಲನಗಳು - ಕಟ್ಟು ...

READ MORE

Related Books