ಚಳವಳಿಯ ಹಾಡುಗಳು

Author : ಬರಗೂರು ರಾಮಚಂದ್ರಪ್ಪ

Pages 80

₹ 50.00




Year of Publication: 2021
Published by: ಜನ ಪ್ರಕಾಶನ
Address: ಬೆಂಗಳೂರು

Synopsys

‘ಚಳವಳಿಯ ಹಾಡುಗಳು’ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಚಳವಳಿಗಳಿಗಾಗಿ ಬರೆದ ಹಾಡುಗಳ ಸಂಕಲನ. ಬರಗೂರು ರಾಮಚಂದ್ರಪ್ಪ ಕನ್ನಡ ಸಾಂಸ್ಕೃತಿಕ ಲೋಕದ ಸೋಜಿಗದ ವ್ಯಕ್ತಿ. ಎಪ್ಪತ್ತರ ದಶಕದ ಮಧ್ಯಭಾಗದಲ್ಲಿ ಬರವಣಿಗೆಯನ್ನು ಪ್ರಾರಂಭಿಸಿದ ಬರಗೂರರು ಮೊದಲಿನಿಂದಲೂ ತಾವು ನಂಬಿದ್ದನ್ನು ಬರೆಯುತ್ತ, ಬದುಕುತ್ತ, ಬರೆದಂತೆ ಬಂದಿದ್ದಾರೆ. ಸಾಹಿತ್ಯ, ಸಿನಿಮಾ, ಸಂಸ್ಕೃತಿ, ಸಂಘಟನೆ- ಹೀಗೆ ವಿವಿಧ ನೆಲೆಗಳಿಗೆ ತಮ್ಮನ್ನು ಒಡ್ಡಿಕೊಂಡಿರುವ ಬರಗೂರರು ಎಲ್ಲಿದ್ದರೂ ರಾಜಿ ಮಾಡಿಕೊಳ್ಳದ ಮನೋಧರ್ಮಕ್ಕೆ, ಸೌಜನ್ಯಶೀಲ ನಿಷ್ಠುರತೆಗೆ ಹೆಸರಾದವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಇವರು ಮಾಡಿದ ಕೆಲಸ ಕರ್ನಾಟಕ ಸಾಂಸ್ಕೃತಿಕ ಲೋಕದಲ್ಲಿ ಅಳಿಸಲಾಗದ ಒಂದು ಅದ್ಭುತ ಅಧ್ಯಾಯವಾಗಿದೆ. ಕನ್ನಡ ಸಾಹಿತ್ಯ ಪುನರ್ ಮೌಲ್ಯೀಕರಣ ಮತ್ತು ಉಪಸಂಸ್ಕೃತಿಯ ಅಧ್ಯಯನ ಯೋಜನೆಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸ ಆಯಾಮ ನೀಡಿದ ಕೀರ್ತಿ ಇವರದಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಯಶಸ್ಸು ಇವರಿಗೆ ಸಲ್ಲುತ್ತದೆ. ಸದಾ ಪ್ರಗತಿಪರ ಚಳವಳಿಗಳ ಜೊತೆಗಾರರಾದ ಬರಗೂರರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ರಿಯೆ ತೆರೆದ ಹಾದಿಯಾಗಿದೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books