ಚಾಮ್ ಸ್ಕಿ ಜೊತೆಗೆ ಎರಡು ಹೆಜ್ಜೆ

Author : ಕೆ.ವಿ. ನಾರಾಯಣ

Pages 634

₹ 710.00




Published by: ಅಹರ್ನಿಶಿ ಪ್ರಕಾಶನ
Address: ಜ್ಞಾನವಿಹಾರ ಬಡಾವಣೆ, ಕಂಟ್ರಿಕ್ಲಬ್ ಎದುರು, ಶಿವಮೊಗ್ಗ-577203
Phone: -9449174662

Synopsys

ಅಮೆರಿಕದ ರಾಜಕೀಯ ಚಿಂತಕ, ಭಾಷಾಶಾಸ್ತ್ರಜ್ಞ ನೋಮ್‌ ಚಾಮ್‌ಸ್ಕಿ ಅವರ ಭಾಷೆಯ ಕುರಿತಾದ ಚಿಂತನೆಗಳನ್ನು ವಿದ್ವಾಂಸ ಕೆ.ವಿ. ನಾರಾಯಣ ಅವರು ಈ ಕೃತಿಯಲ್ಲಿ ಪರಿಚಯವನ್ನು ಮಾಡಿದ್ದಾರೆ.  ನುಡಿಯ ಕುರಿತ ನೋಮ್‌ ಚಾಮ್‌ಸ್ಕಿ ಅವರ ವಿಚಾರಗಳನ್ನು ಕೆ.ವಿ.ಎನ್‌ ಅವರು ತಿಳಿಯಾಗಿ ಇಲ್ಲಿನ ಮೂರು ದೀರ್ಘ ಪ್ರಬಂಧಗಳಲ್ಲಿ ವಿವರಗಳನ್ನು ಒದಗಿಸಿದ್ದಾರೆ.

 

About the Author

ಕೆ.ವಿ. ನಾರಾಯಣ
(20 October 1948)

ಕಂಪಲಾಪುರ ವೀರಣ್ಣ ನಾರಾಯಣ ಅವರು ಜನಿಸಿದ್ದು 1948ರಲ್ಲಿ. ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರ. ಅಮ್ಮ ಕೆಂಚಮ್ಮ ಮತ್ತು ಅಪ್ಪ ವೀರಣ್ಣ. ಮೊದಲ ಹಂತದ ಓದು ಪುತ್ತೂರು ಮತ್ತು ತಾಲ್ಲೂಕು ಕೇಂದ್ರ ಪಿರಿಯಾಪಟ್ಟಣದಲ್ಲಿ. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡು ಪಿ.ಯು.ಸಿ. ಓದಿದರು. ಇಂಜಿನಿಯರಿಂಗ್ ಮಾಡಲು ಅವಕಾಶವಿದ್ದರೂ ಎಂಜಿನಿಯರ್ ಆಗಕೂಡದೆಂದು ತೀರ್ಮಾನಿಸಿದ ಕೆ.ಎ.ಎಸ್ ಮತ್ತೆ ಮೈಸೂರಿನ ಯುವರಾಜ ಕಾಲೇಜಿನಲ್ಲಿ ವಿಜ್ಞಾನದ ಅಭ್ಯಾಸವನ್ನು ಮುಗಿಸಿದರು. ಆನಂತರದಲ್ಲಿ ಬಿ.ಎಡ್. ಮುಗಿಸಿ ಆರಂಭಿಸಿದ್ದು ಹೈಸ್ಕೂಲಿನಲ್ಲಿ ಅಧ್ಯಾಪನ. ಮುಂದಿನ ಓದಿಗಾಗಿ ಮತ್ತೆ ಬೆಂಗಳೂರಿನತ್ತ ಪಯಣ. ಆ ಹೊತ್ತಿಗೇನೆ ಸಾಹಿತ್ಯದ ಓದಿಗೂ ಬಿದ್ದು ಬರವಣಿಗೆಯಲ್ಲೂ ...

READ MORE

Related Books