ಚಿಟ್ಟೆ ಹೆಜ್ಜೆ ಜಾಡು

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 120

₹ 80.00




Year of Publication: 2009
Published by: ಅಂಕಿತ ಪುಸ್ತಕ
Address: ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 26617100

Synopsis

‘ಚಿಟ್ಟೆ ಹೆಜ್ಜೆ ಜಾಡು’ ಕೃತಿಯು ಜೋಗಿ ಅವರ ಕಾದಂಬರಿ. ಈ ಕೃತಿಯ ಮೂಲ ಜೀವಾಳವೇ ಕಾಡು. ಕತೆ, ಕಾದಂಬರಿಗಳಲ್ಲಿ ಕಾಣಿಸಿಕೊಳ್ಳುವ ಕಾಡು ಕಾಲಕಾಲಕ್ಕೆ ಬದಲಾಗುತ್ತಾ ಸಾಗಿದೆ. ಕಾನೂರು ಹೆಗ್ಗಡಿತಿಯ ಕಾಡಲ್ಲಿ ಬೇಟೆ ಒಂದು ಸಂಭ್ರಮವಾಗಿ ಕಾಣಬಹುದು ಎಂಬುದನ್ನು ಇಲ್ಲಿ ಲೇಖಕ ವಿವರಿಸುತ್ತಾರೆ. ಕಾರಂತರ ನಾಯಕನಿಗೆ ಕಾಡು ಕಡಿದು ಅಲ್ಲಿ ಹೊಲಗದ್ದೆ ಮಾಡುವುದು ವ್ಯಕ್ತಿಯ ಸಾಧನೆ, ಛಲದ ಪ್ರತೀಕ ಎಂದು ಬಿಂಬಿಸಿದ್ದಾರೆ. ತೇಜಸ್ವಿಯವರಿಗೆ ಕಾಡಿನ ನಿಗೂಢಗಳ ಕುರಿತು ಅತೀವ ಬೆರಗು. ಅದೊಂದು ಮುಗಿಯದ ಅಚ್ಚರಿಯ ಸಂತೆ ಎಂದೇ ಇಲ್ಲಿ ಲೇಖಕ ವಿಶ್ಲೇಷಿಸಿದ್ದಾರೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books