ಚುಕ್ಕಿ ಬೆಳಕಿನ ಜಾಡು

Author : ಕರ್ಕಿ ಕೃಷ್ಣಮೂರ್ತಿ

Pages 208

₹ 200.00
Year of Publication: 2020
Published by: ಛಂದ ಪುಸ್ತಕ
Address: ಐ-004, ಮಂತ್ರಿಪ್ಯಾರಡೈಸ್‌ ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076
Phone: 9844422782

Synopsys

ಚುಕ್ಕಿ ಬೆಳಕಿನ ಹಾಡು -ಕರ್ಕಿ ಕೃಷ್ಣಮೂರ್ತಿ ಅವರ ಕಾದಂಬರಿ. ಕೃತಿಗೆ ಬೆನ್ನುಡಿ ಬರೆದಿರುವ ಎಂ. ಎಸ್. ಆಶಾದೇವಿ, “ಅಪರಿಚಿತವಾದುದನ್ನು ನನ್ನದೇ ಅನುಭವ ಎಂಬಂತೆ ಅನುಭವಕ್ಕೆ ತಂದುಕೊಡುವುದೇ ಕಲೆಯ ಶಕ್ತಿ. ಕರ್ಕಿ ಕೃಷ್ಣಮೂರ್ತಿಯವರ ಚುಕ್ಕಿ ಬೆಳಕಿನ ಜಾಡು, ಈ ಶಕ್ತಿಯನ್ನು ಬೆನ್ನತ್ತಿ ಹೊರಟಿದೆ. ಸಮಕಾಲೀನ ಜಗತ್ತಿನ ಸನ್ನಿವೇಶಗಳು ಬದುಕಿನ ಅಸಂಗತತೆಯನ್ನು ಇನ್ನೂ ದಟ್ಟವಾಗಿಸುತ್ತಿರುವ ವಾಸ್ತವದ ಶೋಧವಾಗಿಯೂ ಇದು ಕಾಣಿಸುತ್ತದೆ. ಆಮಿಷಗಳನ್ನು ಬದುಕು ಒಡ್ಡುತ್ತದೋ ನಾವೇ ಸೃಷ್ಟಿಸಿಕೊಳ್ಳುವುದೋ ಎನ್ನುವ ಬಗೆಹರಿಯದ ದ್ವಂದ್ವ, ಮಹತ್ವಾಕಾಂಕ್ಷೆ, ಕನಸು, ದುರಾಸೆ, ಸ್ವಾರ್ಥ, ಸಣ್ಣತನಗಳ ಸಹಜ ಅಸಹಜ ನೆಲೆಗಳ ಸಂಘರ್ಷ ಈ ಕೃತಿಯನ್ನು ರೂಪಿಸಿದೆ. ಗುಟ್ಟೇ ಬಿಟ್ಟುಕೊಡದ ಬದುಕನ್ನು, ಅದು ನಿನಗೆ ಬೇಡ ಎಂದದ್ದನ್ನು ಕಿತ್ತುಕೊಳ್ಳಲು ಹಪಹಪಿಸುವ ಮನುಷ್ಯಾವಸ್ಥೆಯನ್ನು ತುಸು ಆತಂಕದಿಂದಲೇ ಈ ಕೃತಿ ಎದುರಾಗುತ್ತದೆ” ಎಂದು ಕಾದಂಬರಿ ಕುರಿತು ವಿಶ್ಲೇಷಿಸಿದ್ದಾರೆ.

About the Author

ಕರ್ಕಿ ಕೃಷ್ಣಮೂರ್ತಿ

ಕರ್ಕಿ ಕೃಷ್ಣಮೂರ್ತಿ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಯವರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್. ಕೆಲಸದ ನಿಮಿತ್ತ ಮಸ್ಕತ್ ಹಾಗೂ ದುಬೈನಲ್ಲಿ ಕೆಲ ವರ್ಷ ನೆಲೆಸಿದ್ದು, ಪ್ರಸ್ತುತ ಬೆಂಗಳೂರಿನ ಕೊಲಿಯರ್ರ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವೈಸ್ ಪ್ರೆಸಿಡೆಂಟ್ ಆಗಿದ್ದಾರೆ. ಓದು, ಸಿನೆಮಾ, ನಾಟಕ, ಪರ್ಯಟನೆ ಇವರ ಆಸಕ್ತಿಯ ಕ್ಷೇತ್ರಗಳು. 'ಮಳೆ ಮಾರುವ ಹುಡುಗ' 'ಗಾಳಿಗೆ ಮೆತ್ತಿದ ಬಣ್ಣ' ಅವರ ಕಥಾಸಂಕಲನಗಳು. 'ಚುಕ್ಕಿ ಬೆಳಕಿನ ಜಾಡು' ಕಾದಂಬರಿ ಪ್ರಕಟಿತ. 'ಸುಗಂಧಿ' ವಿಶೇಷಾಂಕದ ಸಂಪಾದಕರಾಗಿದ್ದರು. ‘ಮಾಸ್ತಿ ಕಥಾ ಪುರಸ್ಕಾರ, ಬೇಂದ್ರೆ ಗ್ರಂಥ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಆರ್.ಎನ್ ಹಬ್ಬು ದತ್ತಿ ಪ್ರಶಸ್ತಿ, ಸ್ವಸ್ತಿ ಪ್ರಕಾಶನದ ...

READ MORE

Related Books